
ಹಿರಿಯ ಪತ್ರಕರ್ತ ರಘುನಾಥ್ ಚ.ಹ ಹಾಗೂ ನಿರ್ದೇಶಕ ಪ್ರಕಾಶರಾಜ್ ಮೇಹು
ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಪ್ರಕಟ: ನಮೋ ವೆಂಕಟೇಶ, ಅಂತರಂಗದ ಅಣ್ಣ ಕೃತಿ ಆಯ್ಕೆ
ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ. ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸುವ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಪತ್ರಕರ್ತ ರಘುನಾಥ್ ಚ.ಹ. ಅವರ ʼನಮೋ ವೆಂಕಟೇಶʼ ಹಾಗೂ ನಿರ್ದೇಶಕ ಪ್ರಕಾಶರಾಜ್ ಮೇಹು ಅವರ ʼಅಂತರಂಗದ ಅಣ್ಣʼ ಕೃತಿ ಆಯ್ಕೆಯಾಗಿದೆ ಎಂದು ವಾರ್ತಾ ಇಲಾಖೆ ಸದಸ್ಯ ಕಾರ್ಯದರ್ಶಿ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಸೋಮವಾರ(ಜ.12) ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿರುವ, ಹಿರಿಯ ಪತ್ರಕರ್ತ ರಘುನಾಥ ಚ.ಹ. ಅವರು ಆಯ್ದ 20 ಸಿನೆಮಾಗಳ ಕುರಿತು ಬರೆದ ಲೇಖನಗಳ ಸಂಗ್ರಹ ʼನಮೋ ವೆಂಕಟೇಶʼ ಕೃತಿ ಆಯ್ಕೆಯಾಗಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರಕರ್ತ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದಾರೆ ಎಂದಿದ್ದಾರೆ.
ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ ,ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ʼಅಂತರಂಗದ ಅಣ್ಣʼ ಕೃತಿಗೆ 2021ನೇ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಸಾಹಿತಿ ಡಾ. ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ.ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿ ಈ ಕೃತಿಯನ್ನು ಆಯ್ಕೆ ಮಾಡಿದ್ದರು.
ಪ್ರಶಸ್ತಿಯು ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ. ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ ಎಂದು ಎಂದು ವಾರ್ತಾ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

