ಕರ್ನಾಟಕ ಎಂಟು ಮಂದಿ ಸಾಧಕರಿಗೆ ಪದ್ಮ ಪ್ರಶಸ್ತಿ ಮುಕುಟ
x

ಪದ್ಮ ಪ್ರಶಸ್ತಿ ವಿಜೇತರು

ಕರ್ನಾಟಕ ಎಂಟು ಮಂದಿ ಸಾಧಕರಿಗೆ 'ಪದ್ಮ ಪ್ರಶಸ್ತಿ' ಮುಕುಟ

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಂಶೋಧನೆ ನಡೆಸಿರುವ . ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೆ ವಿಜ್ಞಾನ ಅಂಡ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪದ್ಮಶ್ರೀ ಪುರಸ್ಕಾರ ದೊರೆತಿದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಶುಭಾ ಅವರು ಸ್ಫೂರ್ತಿಯಾಗಿದ್ದಾರೆ.


ಗಣರಾಜ್ಯೋತ್ಸವದ ಅಂಗವಾಗಿ ಭಾನುವಾರ ಕರ್ನಾಟಕ ಎಂಟು ಮಂದಿ ಸಾಧಕರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ಕಲೆ, ಸಾಹಿತ್ಯ, ಸಮಾಜ ಸೇವೆ, ವೈದ್ಯಕೀಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಈ ಗೌರವಕ್ಕೆ ಭಾಜನರಾಗಿದ್ದಾರೆ.

ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಅಚ್ಚಳಿಯದ ಸಾಧನೆ ಮಾಡಿರುವ ಶತಾವಧಾನಿ ಆರ್. ಗಣೇಶ್ ಅವರಿಗೆ ಅತ್ಯುನ್ನತ ನಾಗರಿಕ ಗೌರವವಾದ ಪದ್ಮ ಭೂಷಣ ಸಂದಿದೆ. ಬಹುಭಾಷಾ ಪಂಡಿತ ಶತಾವಧಾನಿ ಗಣೇಶ್‌ ಅವರು, 18 ಭಾಷೆಗಳಲ್ಲಿ ಪಾಂಡಿತ್ಯ ಹೊಂದಿದ್ದು, 'ಅವಧಾನ ಕಲೆ'ಗೆ ಮರುಜೀವ ನೀಡಿದ ಹೆಗ್ಗಳಿಗೆ ಇವರಿಗಿದೆ. 1300ಕ್ಕೂ ಹೆಚ್ಚು ಅಷ್ಟಾವಧಾನಗಳನ್ನು ನೆರವೇರಿಸಿದ ಗಣೇಶ್‌ ಅವರು ಸಾರಸ್ವತ ಲೋಕದ ಮೇರು ಸಾಧಕರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹರದಹಳ್ಳಿಯ ಪುಸ್ತಕ ಮನೆ ಅಂಕೇಗೌಡರಿಗೆ ಸಮಾಜ ಸೇವೆಗಾಗಿ ಪದ್ಮಶ್ರೀ ಗೌರವ ಸಂದಿದೆ. ತಮ್ಮ ಮನೆಯಲ್ಲೇ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿ ಬೃಹತ್ ಗ್ರಂಥಾಲಯ ನಿರ್ಮಿಸಿರುವ ಇವರು, ಲಕ್ಷಾಂತರ ವಿದ್ಯಾರ್ಥಿಗಳ ಪಾಲಿನ ಜ್ಞಾನ ದಾಸೋಹಿಯಾಗಿದ್ದಾರೆ.



ಕೆಎಲ್ಇ ಸಮೂಹ ಸಂಸ್ಥೆಗಳ ಕಾರ್ಯಾಧ್ಯಕ್ಷರಾಗಿ ಶಿಕ್ಷಣ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ಡಾ. ಪ್ರಭಾಕರ್‌ ಕೋರೆ ಅವರಿಗೆ ಪದ್ಮಶ್ರೀ ಗೌರವ ಲಭಿಸಿದೆ. ಗಡಿ ಭಾಗದ ಬೆಳಗಾವಿಯಲ್ಲಿ ವಿಶ್ವದರ್ಜೆಯ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿರುವುದಲ್ಲದೇ ಲಕ್ಷಾಂತರ ವಿದ್ಯಾರ್ಥಿಗಳ ವಿದ್ಯಾರ್ಜನೆ ಟೊಂಕಕಟ್ಟಿ ನಿಂತಿದ್ದಾರೆ.

ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಮೂಲಕ ಆರು ದಶಕಗಳಿಂದ ಅನಾಥ ಮಕ್ಕಳು ಹಾಗೂ ನಿರ್ಗತಿಕ ಮಹಿಳೆಯರ ಬಾಳಿಗೆ ಬೆಳಕಾಗಿರುವ ಎಸ್.ಜಿ. ಸುಶೀಲಮ್ಮ ಅವರಿಗೆ ಸಮಾಜ ಸೇವೆ ವಿಭಾಗದಲ್ಲಿ ಪದ್ಮಶ್ರೀ ಗೌರವ ದೊರೆತಿದೆ. ಮಹಿಳಾ ಸಬಲೀಕರಣಕ್ಕಾಗಿ ನಡೆಸುತ್ತಿರುವ ಹೋರಾಡುತ್ತಿರುವ ಗಾಂಧಿವಾದಿ ಇವರಾಗಿದ್ದಾರೆ.

ಮಾಧ್ಯಮ ಮತ್ತು ಸಂವಹನ ಕ್ಷೇತ್ರದಲ್ಲಿ ಹೊಸ ಬದಲಾವಣೆ ತಂದಿರುವ ಶಶಿ ಶೇಖರ್ ವೆಂಪತಿ ಅವರಿಗೆ ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಸಕ್ತ ಸಾಲಿನ ಪದ್ಮಶ್ರೀ ಗೌರವ ಸಂದಿದೆ. ಶಿಕ್ಷಣ ಪ್ರಸಾರದಲ್ಲಿ ತಂತ್ರಜ್ಞಾನ ಬಳಸಿಕೊಳ್ಳುವಲ್ಲಿ ಶಶಿ ಶೇಖರ್‌ ವೆಂಪತಿ ಮಹತ್ವದ ಪಾತ್ರ ವಹಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಂಶೋಧನೆ ನಡೆಸಿರುವ . ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೆ ವಿಜ್ಞಾನ ಅಂಡ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪದ್ಮಶ್ರೀ ಪುರಸ್ಕಾರ ದೊರೆತಿದೆ. ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಶುಭಾ ಅವರು ಸ್ಫೂರ್ತಿಯಾಗಿದ್ದಾರೆ.

ಹಿಮೋಫಿಲಿಯಾ ರೋಗಿಗಳ ಚಿಕಿತ್ಸೆಗಾಗಿ ಬದುಕನ್ನೇ ಮುಡಿಪಾಗಿಟ್ಟಿರುವ ಡಾ. ಸುರೇಶ್ ಹನಗವಾಡಿ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಪದ್ಮಶ್ರೀ ಗೌರವ ಲಭಿಸಿದೆ. ದಾವಣಗೆರೆಯಲ್ಲಿ ಹಿಮೋಫಿಲಿಯಾ ಚಿಕಿತ್ಸಾ ಕೇಂದ್ರದ ಮೂಲಕ ಸಾವಿರಾರು ಜೀವಗಳನ್ನು ಉಳಿಸಿದ ಮಹಾನ್ ಮಾನವತಾವಾದಿ ಸುರೇಶ್‌ ಹನಗವಾಡಿ ಅವರು, ಸ್ವತಃ ಹಿಮೋಫಿಲಿಯಾಗೆ ತುತ್ತಾದರೂ ರೋಗಿಗಳ ಆರೈಕೆ ಟೊಂಕಕಟ್ಟಿ ನಿಂತಿದ್ದಾರೆ.

ಟಿಟಿಕೆ ಗ್ರೂಪ್ ಮೂಲಕ ಭಾರತೀಯ ಉದ್ಯಮ ಕ್ಷೇತ್ರದಲ್ಲಿ ಹೊಸ ಸಂಪ್ರದಾಯ ಹುಟ್ಟುಹಾಕಿದ ಟಿಟಿ ಜಗನ್ನಾಥನ್ ಅವರಿಗೆ ಮರಣೋತ್ತರವಾಗಿ ವ್ಯಾಪಾರ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಸಂದಿದೆ. ಉದ್ಯಮಶೀಲತೆ ಮತ್ತು ಆರ್ಥಿಕ ಸುಧಾರಣೆಗೆ ನೀಡಿದ ಕೊಡುಗೆ ಪರಿಗಣಿಸಿ ಮರಣೋತ್ತರ ಗೌರವ ನೀಡಲಾಗಿದೆ.

Read More
Next Story