
ಸಾಂದರ್ಭಿಕ ಚಿತ್ರ
ರಾಜ್ಯದ ಶಾಲೆಗಳಲ್ಲಿ ಇನ್ನು ಮುಂದೆ ನಿತ್ಯ ಒಂದು ಹೆಚ್ಚುವರಿ ಪೀರಿಯಡ್
ಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿಯಾಗಿದ್ದ ದಸರಾ ರಜೆಯನ್ನು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಪೂರ್ಣಗೊಳಿಸಲು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿತ್ತು.
ಜಾತಿ ಗಣತಿ ಹಿನ್ನೆಲೆಯಲ್ಲಿ ದಸರಾ ರಜೆಯನ್ನು ವಿಸ್ತರಿಸಿದ್ದರಿಂದ ಉಂಟಾಗಿರುವ ಕಲಿಕಾ ಅವಧಿಯ ಕೊರತೆಯನ್ನು ಸರಿದೂಗಿಸಲು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿದಿನ ಒಂದು ಹೆಚ್ಚುವರಿ ತರಗತಿ (ಪೀರಿಯಡ್) ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಈ ನಿರ್ಧಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿಯಾಗಿದ್ದ ದಸರಾ ರಜೆಯನ್ನು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಪೂರ್ಣಗೊಳಿಸಲು ಅಕ್ಟೋಬರ್ 18ರವರೆಗೆ ವಿಸ್ತರಿಸಲಾಗಿತ್ತು. ಇದರಿಂದಾಗಿ, ಅಕ್ಟೋಬರ್ 12ರ ಭಾನುವಾರವನ್ನು ಹೊರತುಪಡಿಸಿ ಒಟ್ಟು 10 ದಿನಗಳ ಬೋಧನಾ ಅವಧಿ ನಿಗದಿಯಾಗಿದೆ.
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈ 10 ದಿನಗಳಲ್ಲಿ 8 ಪೂರ್ಣ ದಿನ ಮತ್ತು 2 ಅರ್ಧ ದಿನಗಳ ತರಗತಿ ನಷ್ಟವಾಗಿದ್ದು, ಒಟ್ಟು 56 ಪೀರಿಯಡ್‌ಗಳ ಕೊರತೆ ಉಂಟಾಗಿದೆ. ಅದೇ ರೀತಿ, ಪ್ರಾಥಮಿಕ ಶಾಲಾ ಮಕ್ಕಳಿಗೆ 74 ಪೀರಿಯಡ್‌ಗಳ ಪಾಠದ ಕೊರತೆಯಾಗಿದೆ. ಈ ಕೊರತೆಯನ್ನು ನೀಗಿಸಲು, ಮುಂದಿನ ಫೆಬ್ರವರಿ 5ರವರೆಗಿನ 74 ಶಾಲಾ ದಿನಗಳಲ್ಲಿ ಪ್ರತಿದಿನ ಒಂದು ಹೆಚ್ಚುವರಿ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಶಿಕ್ಷಣ ಇಲಾಖೆಯ ಆದೇಶ
ರಾಜ್ಯ ಸರ್ಕಾರದ ಈ ಕ್ರಮದಿಂದಾಗಿ, ರಜೆಯಿಂದ ಉಂಟಾದ ಕಲಿಕಾ ಅಂತರವನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಶಾಲೆಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ನಿಗದಿತ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಸಹಕರಿಸಬೇಕೆಂದು ಇಲಾಖೆ ಮನವಿ ಮಾಡಿದೆ.

