KIADB LAND Scam | ವಿವಾದಿತ ಜಾಗ ವಾಪಸ್ ನೀಡಲು ಖರ್ಗೆ ಕುಟುಂಬ ನಿರ್ಧಾರ
ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದ ಸಿದ್ಧಾರ್ಥ ವಿಹಾರ್ ಟ್ರಸ್ಟ್ ಭೂಮಿಯನ್ನು ಸರ್ಕಾರಕ್ಕೆ ವಾಸಪ್ ಮಾಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ನಿರ್ಧರಿಸಿದೆ.
ಖಾಸಗಿ ಕುಟುಂಬ ಟ್ರಸ್ಟಿಗೆ ಸರ್ಕಾರಿ ಭೂಮಿ ನೀಡಿದ ವಿವಾದ ರಾಜ್ಯಪಾಲರ ಅಂಗಳಕ್ಕೆ ತಲುಪುತ್ತಿದ್ದಂತೆಯೇ ಖರ್ಗೆ ಕುಟುಂಬ ಜಮೀನು ವಾಪಸ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಭಾನುವಾರ (ಅ.13) ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬ ಟ್ರಸ್ಟ್ಗೆ ನೀಡಿದ್ದ ಭೂಮಿ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ.
ಕೆಐಎಡಿಬಿ ನಮ್ಮ ಕುಟುಂಬ ಟ್ರಸ್ಟಿಗೆ ಹಂಚಿಕೆ ಮಾಡಿದ್ದ ಭೂಮಿಯನ್ನು ವಾಪಸ್ ಮಾಡಲು ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಟ್ರಸ್ಟ್ ಅಧ್ಯಕ್ಷ ನಮ್ಮ ಸಹೋದರ ರಾಹುಲ್ ಖರ್ಗೆಗೆ ಮಾಹಿತಿ ಇರಲಿಲ್ಲ ಅನ್ಸುತ್ತೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ನಮ್ಮ ಅಣ್ಣ ರಾಹುಲ್ ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರಿಗೆ ಹಿಂಸೆ ಆಗುತ್ತಿದೆ ಎಂದು ನೊಂದಿದ್ದಾರೆ .ಹೀಗಾಗಿ ಸೆಪ್ಟೆಂಬರ್ 29 ರಂದು ಅವರು ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ನೀಡಿರುವ ಸೈಟನ್ನು ಕಾನೂನಾತ್ಮಕವಾಗಿ ಮರಳಿ ನೀಡುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ಟ್ರಸ್ಟ್ ಅಧ್ಯಕ್ಷ ರಾಹುಲ್ ಖರ್ಗೆ ಅವರಿಗೆ ಹೆಚ್ಚು ಅರಿವು ಇರಲಿಲ್ಲ ಅನ್ಸುತ್ತೆ. ಅವರಿಗೆ ಕೇಂದ್ರದಿಂದ ಸಾಕಷ್ಟು ಅವಾರ್ಡ್ ಸಿಕ್ಕಿದೆ. ಯುಪಿಎಸ್ ಇ ನಲ್ಲೂ ರ್ಯಾಂಕ್ ಬಂದಿದ್ರು. ಯುರೋಸ್ಪೇಸ್ ನಲ್ಲಿ ಜಾಗ ಬೇಕು ಅಂತ ಅರ್ಜಿ ಹಾಕಿದ್ದರು. ಅದರ ಅನ್ವಯ ಅವರಿಗೆ ಸೈಟ್ ಅಲರ್ಟ್ ಆಗಿದೆ. ಸಂಪೂರ್ಣ ದಾಖಲೆ ಆಧಾರದ ಮೇಲೆ ಸೈಟ್ ಸಿಕ್ಕಿದೆ. ಇಲ್ಲಿ ತರಾತುರಿಯಲ್ಲಿ ಏನೂ ಆಗಿಲ್ಲ ಎಂದು ಸಮಜಾಯಿಷಿ ನೀಡಿದರು.
ಸಿಎ ಸೈಟ್ ತೆಗೆದುಕೊಳ್ಳುವ ಬಗ್ಗೆ ರಾಹುಲ್ ಖರ್ಗೆ ನಿರ್ಧಾರ ಮಾಡಿದ್ದರು. ಈಗ ಅವರೇ ಇಷ್ಟ ಇಲ್ಲ ಅಂತ ಮರಳಿ ನೀಡಿದ್ದಾರೆ. ರಾಹುಲ್ ಖರ್ಗೆ ಯಾರು ಅಂತ ಯಾರಿಗೂ ಗೊತ್ತಿಲ್ಲ. ಕಷ್ಟ ಪಟ್ಟು ರಾಹುಲ್ ಖರ್ಗೆ ಯುಪಿಎಸ್ ಇ ಪಾಸ್ ಆಗಿದ್ದಾರೆ. ಕಷ್ಟ ಪಟ್ಟು ನಮ್ಮ ಕುಟುಂಬದಲ್ಲಿ ರಾಹುಲ್ ಖರ್ಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇದೊಂದು ರಾಜಕೀಯ ಆರೋಪ ಅಷ್ಟೇ. ಆದ್ರೆ ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ರಾಹುಲ್ ಖರ್ಗೆ ನಮ್ಮ ರೀತಿ ಅಲ್ಲ.. ಅವರು ಮೃದು ಸ್ವಭಾವದವರು. ಬಿಜೆಪಿಯವರು ಮನುಸ್ಕೃತಿ ಸ್ವಭಾವದವರು. ಬಿಜೆಪಿ ನಾಯಕರ ಮಕ್ಕಳನ್ನು RSS ಗೆ ಕಳಿಸೋದಿಲ್ಲ. ನಮಗೆ ಸದಾ ಕಾಲ ವೈಯಕ್ತಿಕವಾಗಿ ದಾಳಿ ಮಾಡುತ್ತಾರೆ. ಚುಚ್ಚು ಮಾತುಗಳನ್ನು ತೇಜೋವಧೆ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.