ಅನುವಾದ ಅವಾಂತರ | ಮರು ಪರೀಕ್ಷೆ ನಡೆಸಲು ಕೆಪಿಎಸ್ಸಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಅನುವಾದ ಅವಾಂತರದ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಲೋಕಸೇವಾ ಆಯೋಗ(KPSC)ಕ್ಕೆ ಸೂಚಿಸಿದ್ದಾರೆ.
ಅನುವಾದ ಅವಾಂತರದ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಲೋಕಸೇವಾ ಆಯೋಗ(KPSC)ಕ್ಕೆ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ʼಎಕ್ಸ್ʼನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ.” ಎಂದು ತಿಳಿಸಿದ್ದಾರೆ.
“ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ” ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿದ್ದೇನೆ.
— Siddaramaiah (@siddaramaiah) September 2, 2024
ಕರ್ತವ್ಯ…
ಏನಿದು ಅನುವಾದ ಅವಾಂತರ?
ಗೆಜೆಟೆಡ್ ಪ್ರೊಬೆಷನರಿ ವರ್ಗದ 384 ಹುದ್ದೆಗಳ ನೇಮಕಾತಿಗಾಗಿ ಕೆಪಿಎಸ್ಸಿ ಆ.27 ರಂದು ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಅನುವಾದಿತ ಪ್ರಶ್ನೆಗಳಲ್ಲಿ ಭಾರೀ ಪ್ರಮಾಣದ ಕನ್ನಡ ದೋಷ ಕಂಡು ಬಂದಿದ್ದವು.
ಈ ಕುರಿತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣದಲ್ಲಿ ಕೆಪಿಎಸ್ಸಿಯ ನಿರ್ಲಕ್ಷ್ಯ ಧೋರಣೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುವ ಕೆಪಿಎಸ್ಸಿಗೆ ಬದಲಾವಣೆ ಬೇಕು, ಕೆಪಿಎಸ್ಸಿ ಮರು ಪರೀಕ್ಷೆ ನಡೆಸಬೇಕು ಎಂಬ ಕೂಗು ಎದ್ದಿತ್ತು.
ಸಾರ್ವಜನಿಕ ಆಕ್ರೋಶವನ್ನು ಗಂಭೀರವಾಗಿ ಪರಿಗಣಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೆಪಿಎಸ್ಇಯಿಂದ ವರದಿ ಕೇಳಿತ್ತು. ಈ ನಡುವೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಕೆಪಿಎಸ್ಸಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದರು.