ಕ್ಷೀರ ಭಾಗ್ಯ ಹಗರಣ | ಹಾಲಿನ ಪುಡಿ ಮಾರಾಟ: 127 ಮುಖ್ಯ ಶಿಕ್ಷಕರಿಗೆ ನೋಟಿಸ್
x
ಕ್ಷೀರಾಭಾಗ್ಯ

ಕ್ಷೀರ ಭಾಗ್ಯ ಹಗರಣ | ಹಾಲಿನ ಪುಡಿ ಮಾರಾಟ: 127 ಮುಖ್ಯ ಶಿಕ್ಷಕರಿಗೆ ನೋಟಿಸ್

ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳಿಗೆ ಪೌಷ್ಟಿಕತೆ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿರುವ ಕ್ಷೀರ ಭಾಗ್ಯ ಯೋಜನೆಯಡಿ ಮಕ್ಕಳಿಗಾಗಿ ನೀಡುವ ಹಾಲಿನ ಪುಡಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲೆಯ 127 ಜನ ಮುಖ್ಯಶಿಕ್ಷಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.


Click the Play button to hear this message in audio format

ಬಡ ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ವಿತರಿಸುತ್ತಿರುವ ಹಾಲಿನ ಪುಡಿಯನ್ನೇ ಕಾಳಸಂತೆಯಲ್ಲಿ ಮಾರಿಕೊಂಡ ಆರೋಪದ ಮೇಲೆ ಬಾಗಲಕೋಟೆ ಜಿಲ್ಲೆಯ 127 ಮುಖ್ಯಶಿಕ್ಷಕರಿಗೆ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಮಕ್ಕಳ ಪೌಷ್ಟಿಕತೆ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿರುವ ಕ್ಷೀರ ಭಾಗ್ಯ ಯೋಜನೆಯಡಿ ಮಕ್ಕಳಿಗಾಗಿ ನೀಡುವ ಹಾಲಿನ ಪುಡಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವ ಜಾಲದ ಕುರಿತು ತನಿಖೆ ನಡೆಸುತ್ತಿರುವ ಬಾಗಲಕೋಟೆ ಪೊಲೀಸರು ಜಿಲ್ಲೆಯ 127 ಮುಖ್ಯಶಿಕ್ಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ.

ಕಳೆದ ಅಕ್ಟೋಬರಿನಲ್ಲಿ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದ ಶೆಡ್‌ ಒಂದರ ಮೇಲೆ ದಾಳಿ ನಡೆಸಿದ್ದ ಪೊಲೀಸರು, ಅಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 18.14 ಲಕ್ಷ ರೂ. ಮೌಲ್ಯದ ಹಾಲಿನ ಪುಡಿ ಪ್ಯಾಕೆಟ್, ರಾಗಿ ಹಿಟ್ಟು, ಅಡುಗೆ ಎಣ್ಣೆ ಪಾಕೇಟ್ ಸೇರಿದಂತೆ ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಹಾಗೂ ಕ್ಷೀರಭಾಗ್ಯ ಯೋಜನೆಯಡಿ ವಿತರಿಸುವ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು.

ದಾಳಿ ವೇಳೆ ಆರೋಪಿ ಸಿದ್ದಪ್ಪ ಎಂಬಾತನನ್ನು ಬಂಧಿಸಿದ್ದ, ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಯಾವ ಯಾವ ಸರ್ಕಾರಿ ಶಾಲೆಗಳಿಂದ ತಾನು ಹಾಲಿನ ಪ್ಯಾಕೆಟ್ ಪಡೆದಿದ್ದೇನೆ ಎಂಬುದನ್ನು ಆತ ಬಾಯಿಬಿಟ್ಟಿದ್ದ. ಆತನ ಹೇಳಿಕೆ ಮೇರೆಗೆ ಬಾಗಲಕೋಟೆ ಸಿಇಎನ್ ಠಾಣೆ ಪೊಲೀಸರು ಹುನಗುಂದ, ಬಾದಾಮಿ, ಬಾಗಲಕೋಟೆ ತಾಲೂಕಿನ 127ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರಿಗೆ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿದ್ದಾರೆ.

Read More
Next Story