
ನನ್ನನ್ನು ಜೈಲಿಗೆ ಕಳಿಸಲು ಸರ್ಕಾರದ ಸಂಚು: ಎಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನ ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಎಚ್‌ಡಿಕೆ ಹೇಳಿದ್ದಾರೆ
ಹಿಂದೆ ಇದೇ ಸಿದ್ದರಾಮಯ್ಯ ಅವರ ಪಟಾಲಂ ನನ್ನನ್ನು ಒಂದು ದಿನವಾದರೂ ಜೈಲಿಗೆ ಕಳಿಸಬೇಕು ಎಂದು ಸಂಚು ಹೂಡಿತ್ತು. ಈಗಿರುವ ಅವರ ಪಟಾಲಂ ಕೂಡ ಅದೇ ರೀತಿಯಲ್ಲಿ ಕನಸು ಕಾಣುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.
ನವದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಒಬ್ಬ ಅಧಿಕಾರಿಯ ಕರ್ಮಕಾಂಡದ ಬಗ್ಗೆ ಮಾತಾಡಿದ್ದೆ. ಮಾಧ್ಯಮಗಳ ಮುಂದೆ ಅವರ ಕಥೆಯನ್ನು ಬಯಲು ಮಾಡಿದ್ದೆ. ಆದರೆ, ಅವರು ನನ್ನನ್ನು ಜೈಲಿಗೆ ಕಳಿಸುವ ತಿರುಕನ ಕನಸು ಕಾಣುತ್ತಿದ್ದಾರೆ. ಅವರು ಎಲ್ಲಿ ಯಾರ ಚೇಂಬರ್ ನಲ್ಲಿ ಕುಳಿತು ಮಾತಾಡಿದ್ದಾರೆ ಎನ್ನುವ ಮಾಹಿತಿ ನನಗೆ ಇದೆ. ಒಂದು ದಿನವಾದರೂ ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಎಂದು ಚರ್ಚೆ ಮಾಡಲಾಗಿದೆ ಇಂದು ಆರೋಪ ಮಾಡಿದರು.
ನಾನು ಜಾಮೀನು ತೆಗೆದುಕೊಂಡಿದ್ದೇನೆ. ಅದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ ಈ ಸರ್ಕಾರದ ಕೆಟ್ಟ ಅಧಿಕಾರಿಗಳು ಏನು ಬೇಕಾದರೂ ಮಾಡುತ್ತಾರೆ ಎಂದು ನನ್ನ ವಕೀಲರು ಜಾಮೀನು ಪಡೆದುಕೊಳ್ಳಬೇಕು ಎಂದು ಹೇಳಿದ್ದರು. ಅದಕ್ಕೆ ಜಾಮೀನು ಪಡೆದಿದ್ದೇನೆ ಎಂದು ಅವರು ಹೇಳಿದರು.