ಅರಣ್ಯ ಇಲಾಖೆ ಹುದ್ದೆಗಳಲ್ಲಿ ಸಿಗದ ಪ್ರಾತಿನಿಧ್ಯ; ಅರಣ್ಯ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
x
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅರಣ್ಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಅರಣ್ಯ ಇಲಾಖೆ ಹುದ್ದೆಗಳಲ್ಲಿ ಸಿಗದ ಪ್ರಾತಿನಿಧ್ಯ; ಅರಣ್ಯ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕರ್ನಾಟಕದಲ್ಲಿ ಕೊಡಗಿನ ಪೊನ್ನಂಪೇಟೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾತ್ರ ಅರಣ್ಯ ವಿಶ್ವವಿದ್ಯಾಲಯಗಳಿವೆ. ಈ ಮೂರು ಕಾಲೇಜಿನಲ್ಲಿ ಸುಮಾರು 900 ವಿದ್ಯಾರ್ಥಿಗಳು ಅರಣ್ಯ ಶಾಸ್ತ್ರ ಅಧ್ಯಯನ ಮಾಡುತ್ತಿದ್ದಾರೆ.


ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವಿಯನ್ನು ಕನಿಷ್ಠ ವಿದ್ಯಾರ್ಹತೆಯನ್ನಾಗಿ ಪರಿಗಣಿಸಲು ಒತ್ತಾಯಿಸಿ ಅರಣ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸೋಮವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಆರಂಭಿಸಿರುವ ವಿದ್ಯಾರ್ಥಿಗಳ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಅರಣ್ಯ ಇಲಾಖೆಯಲ್ಲಿ ಈ ಹಿಂದೆ ಶೇ 50 ರಷ್ಟು ಹುದ್ದೆಗಳನ್ನು ಬಿ.ಎಸ್ಸಿ ಅರಣ್ಯ ಶಾಸ್ತ್ರ ಪದವೀಧರರಿಗೆ ಮೀಸಲಿಡಲಾಗಿತ್ತು. ಆದರೆ, ಈಗ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ಸಾಮಾನ್ಯ ಪದವೀಧರರನ್ನು ಅರಣ್ಯ ಇಲಾಖೆ ಹುದ್ದೆಗಳಿಗೆ ಪರಿಗಣಿಸಲಾಗಿದೆ. ಇದರಿಂದ ಅರಣ್ಯ ಶಾಸ್ತ್ರ ಅಧ್ಯಯನ ಮಾಡಿರುವ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕದಲ್ಲಿ ಕೊಡಗಿನ ಪೊನ್ನಂಪೇಟೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾತ್ರ ಅರಣ್ಯ ವಿಶ್ವವಿದ್ಯಾಲಯಗಳಿವೆ. ಈ ಮೂರು ಕಾಲೇಜಿನಲ್ಲಿ ಸುಮಾರು 900 ವಿದ್ಯಾರ್ಥಿಗಳು ಅರಣ್ಯ ಶಾಸ್ತ್ರ ಅಧ್ಯಯನ ಮಾಡುತ್ತಿದ್ದಾರೆ. ಬಿಎಸ್ಸಿ ಪದವಿಯಲ್ಲಿ ಸಾಮಾನ್ಯ ಪದವೀಧರರನ್ನು ಅರಣ್ಯ ಇಲಾಖೆಯಲ್ಲಿ ಪರಿಗಣಿಸುತ್ತಿರುವುದರಿಂದ ನಮಗೆ ಅನ್ಯಾಯವಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಅರಣ್ಯ ಇಲಾಖೆ ಹುದ್ದೆಗಳಲ್ಲಿ ಪ್ರಾತಿನಿಧ್ಯ ನೀಡಲು ಸಾಧ್ಯವಾಗದೇ ಹೋದರೆ ಅರಣ್ಯ ಶಾಸ್ತ್ರ ಅಧ್ಯಯನವನ್ನೇ ಸ್ಥಗಿತಗೊಳಿಸಬೇಕು. ಪ್ರಸ್ತುತ, ಮೂರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ನಾಲ್ಕನೇ ಸೆಮಿಸ್ಟರ್‌ ನಲ್ಲಿ ಓದುತ್ತಿದ್ದು, ಶಿಕ್ಷಣ ಪೂರ್ಣಗೊಂಡ ಬಳಿಕ ಕಾಲೇಜುಗಳನ್ನೇ ಮುಚ್ಚಿದರೆ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More
Next Story