ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಜಮೀನು ಮಂಜೂರು ಪ್ರಕರಣ : ಖಾಸಗಿ ದೂರಿನ ವಿಚಾರಣೆ ಮುಂದೂಡಿಕೆ
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮತ್ತು ಬಿಡಿಎಯಿಂದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ 5 ಎಕರೆ ಜಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ವಿಜಯರಾಘವ ಮರಾಠೆ ಎಂಬುವರು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕುಟುಂಬ ಸದಸ್ಯರ ಒಡೆತನದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ದೇವನಹಳ್ಳಿ ಏರೋಸ್ಪೇಸ್ ಪಾರ್ಕ್‌ನಲ್ಲಿ ಐದು ಎಕರೆ ಭೂಮಿ ಮಂಜೂರು ಮಾಡಿದ ಪ್ರಕರಣದ ದೂರು ಅಂಗೀಕರಿಸುವ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆ.12ಕ್ಕೆ ಮುಂದೂಡಿದೆ.
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮತ್ತು ಬಿಡಿಎಯಿಂದ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಸೇರಿದ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ 5 ಎಕರೆ ಜಮೀನು ಮಂಜೂರು ಮಾಡಿದ್ದನ್ನು ಪ್ರಶ್ನಿಸಿ ವಿಜಯರಾಘವ ಮರಾಠೆ ಎಂಬುವರು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು.
ಖರ್ಗೆ ಕುಟುಂಬ ಸದಸ್ಯರು ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಟ್ರಸ್ಟ್ ಗೆ ಜಾಗ ಮಂಜೂರು ಮಾಡಿಸಿಕೊಂಡಿದ್ದರು. ಅಲ್ಲದೆ, ಶೇ.50ರಷ್ಟು ಸಬ್ಸಿಡಿ ಪಡೆದು ಬಿಡಿಎ ಕೂಡ ಜಮೀನು ಹಂಚಿಕೆ ಮಾಡಿದೆ. ಈ ಕುರಿತು ಆರೋಪ ಕೇಳಿ ಬಂದ ಕೂಡಲೇ ಖರ್ಗೆ ಕುಟುಂಬ ಸದಸ್ಯರು ಜಮೀನು ವಾಪಸ್ ನೀಡಿದ್ದಾರೆ ಎಂದು ಆರೋಪಿಸಿ ವಿಜಯರಾಘವ ಮರಾಠೆ ಈ ಹಿಂದೆ ಲೋಕಾಯುಕ್ತಕ್ಕೂ ದೂರು ನೀಡಿದ್ದರು. ಆದರೆ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ದೂರುದಾರರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ದೂರನ್ನು ಅಂಗೀಕರಿಸಬೇಕೇ ಅಥವಾ ಬೇಡವೇ ಎಂಬುದರ ವಿಚಾರಣೆ ನಡೆಸಿದ ನ್ಯಾಯಾಲಯ ಆ.12ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ.