ಪಂಚಮಸಾಲಿ ಹೋರಾಟಗಾರರ ಮೇಲೆ  ಲಾಠಿಚಾರ್ಜ್: ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಆಗ್ರಹ
x
ಸಿ.ಟಿ ರವಿ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ನ್ಯಾಯಾಂಗ ತನಿಖೆಗೆ ಸಿ.ಟಿ ರವಿ ಆಗ್ರಹ

ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ಕುರಿತಂತೆ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಿಸುವಂತೆ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಸಿದ್ದಾರೆ.


Click the Play button to hear this message in audio format

ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿಚಾರ್ಜ್ ಕುರಿತಂತೆ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಮಾಡಿಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದ ಶಾಂತಿಯುತ ಪ್ರತಿಭಟನೆ, ಹೋರಾಟಗಾರರ ಮೇಲೆ ಸರ್ಕಾರವು ಲಾಠಿ ಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ ಸಾಮಾಜಿಕ ನ್ಯಾಯದಡಿ ಪಂಚಮಸಾಲಿಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿ. ಲಾಠಿ ಚಾರ್ಜ್‌ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ತಿಳಿಸಿದ್ದಾರೆ.

ಪಂಚಮಶಾಲಿ ಹೋರಾಟ ಇದೇ ಮೊದಲಲ್ಲ. ಈ ಹಿಂದೆಯೂ ಮಾಡಿತ್ತು. 2 ಸಿಗೆ ಶೇ. 4 ಮೀಸಲಾತಿ ಇದ್ದುದನ್ನು ಶೇ. 6 ಮಾಡಿದ್ದು, 2 ಡಿ ಅಡಿ ಶೇ. 5 ಇದ್ದುದನ್ನು ಶೇ. 7 ಮಾಡಿದ್ದರು. ಪಂಚಮಸಾಲಿಗಳನ್ನೂ 2 ಡಿ ವ್ಯಾಪ್ತಿ ಒಳಗಡೆ ತರುವ ಕೆಲಸ ಮಾಡಲಾಗಿತ್ತು. ಅದನ್ನು ಈ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡಿಲ್ಲ. 2 ಎ ಮೀಸಲಾತಿ ಬಗ್ಗೆಯೂ ಸರಿಯಾಗಿ ಸ್ಪಂದಿಸಿಲ್ಲ. ಈ ಮೂಲಕ ಹೋರಾಟಕ್ಕಿಳಿಯುವ ಅನಿವಾರ್ಯತೆಯನ್ನು ಸೃಷ್ಟಿ ಮಾಡಿದ್ದೇ ಆಳುವ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದರು.

ಬೆಳಗಾವಿಯಲ್ಲಿ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಆಗ ನಡೆಸಿದ ಲಾಠಿಚಾರ್ಜ್‍ನಿಂದ ಹೋರಾಟದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಲಿಂಗಾಯತ ಸಮುದಾಯಕ್ಕೆ ಸೇರಿದ ಪಂಚಮಸಾಲಿ ರೈತರು ಗಾಯಗೊಂಡಿದ್ದಾರೆ. ಸರ್ಕಾರದ್ದು ಸರ್ವಾಧಿಕಾರಿ ನಡೆ, ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಖಂಡಿಸಿದರು.

Read More
Next Story