ಜಾತಿ ಕುರಿತು ಅವಹೇಳನ ಆರೋಪ; ವಕೀಲ ಜಗದೀಶ್‌ ಬಂಧನ
x

ವಕೀಲ ಜಗದೀಶ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. 

ಜಾತಿ ಕುರಿತು ಅವಹೇಳನ ಆರೋಪ; ವಕೀಲ ಜಗದೀಶ್‌ ಬಂಧನ

ಆಗಸ್ಟ್ 11 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಜಗದೀಶ್ ಅವರು ಅಪ್‌ಲೋಡ್ ಮಾಡಿದ್ದ ವಿಡಿಯೋದಲ್ಲಿ ಯತ್ನಾಳ್ ಅವರ ಕುರಿತು ಮಾತನಾಡುವಾಗ ಜಾತಿ ನಿಂದನೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.


ಸಾಮಾಜಿಕ ಜಾಲತಾಣದಲ್ಲಿ ಜಾತಿ ಕುರಿತು ನಿಂದನೆ ಮಾಡಿ ಮಾತನಾಡಿದ ಆರೋಪದ ಮೇಲೆ ಬಿಗ್ ಬಾಸ್ ಮಾಜಿ ಸ್ಪರ್ಧಿ ಮತ್ತು ವಕೀಲ ಜಗದೀಶ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಬೇಡ್ಕರ್ ದಲಿತ ಧ್ವನಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಗಸ್ಟ್ 11 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಜಗದೀಶ್ ಅವರು ಅಪ್‌ಲೋಡ್ ಮಾಡಿದ್ದ ವಿಡಿಯೋದಲ್ಲಿ ಯತ್ನಾಳ್ ಅವರ ಕುರಿತು ಮಾತನಾಡುವಾಗ ಜಾತಿ ನಿಂದನೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 196 ಮತ್ತು 299ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಪೊಲೀಸರು ಜಗದೀಶ್ ಅವರ ಮನೆಗೆ ವಿಚಾರಣೆಗೆ ತೆರಳಿದ್ದರು. ಆದರೆ, ಜಗದೀಶ್ ಅವರು ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ, ಶನಿವಾರ ಮತ್ತೆ ಅವರ ಮನೆಗೆ ತೆರಳಿದ ಪೊಲೀಸರು ಜಗದೀಶ್ ಅವರನ್ನು ಬಂಧಿಸಿ, ಹೆಚ್ಚಿನ ವಿಚಾರಣೆಗಾಗಿ ಕರೆದೊಯ್ದಿದ್ದಾರೆ.

ಪ್ರಸ್ತುತ, ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಜಗದೀಶ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

Read More
Next Story