Leopard Attack | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನಿವಾಸಕ್ಕೆ ನುಗ್ಗಿದ ಚಿರತೆ
Uttara Kannada| ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಸಾಕು ನಾಯಿ ಯಶಸ್ವಿಯಾಗಿದೆ.
ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆ ಅಂಗಳಕ್ಕೆ ನುಗ್ಗಿರುವ ಘಟನೆ ನಡೆದಿದೆ.
ಮಂಗಳವಾರ ಮಂಜಾನೆ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನಿವಾಸ ಶಿರಸಿ ತಾಲೂಕಿನ ಕಾಗೇರಿಯಲ್ಲಿದೆ. ಮನೆಯಯಲ್ಲಿದ್ದ ಸಾಕು ನಾಯಿಯನ್ನು ಬೇಟೆಯಾಡಲು ಚಿರತೆ ಅಟ್ಟಾಡಿಸಿಕೊಂಡು ಹೋಗಿದೆ. ತೋಟದ ಭಾಗದಿಂದ ಮನೆಯ ನಾಯಿಯನ್ನು ಚಿರತೆ ಅಟ್ಟಿಸಿಕೊಂಡು ಬಂದಿದೆ. ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳುವಲ್ಲಿ ಕಾಗೇರಿಯವರ ಸಾಕು ನಾಯಿ ಯಶಸ್ವಿಯಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಚಿರತೆ ಮನೆ ಬಾಗಿಲಿಗೆ ಬಂದರೂ ಯಾವುದೇ ಪ್ರಾಣಿಪಕ್ಷಿಗಳಿಗೆ ಹಾನಿಯಾಗಿಲ್ಲ. ಈ ಭಾಗದಲ್ಲಿ ಚಿರತೆ ಓಡಾಟ ಸಾಮಾನ್ಯವಾಗಿತ್ತು. ಇತ್ತೀಚೆಗೆ ಅಹಾರ ಅರಸಿ ನಾಡಿನತ್ತ ಆಗಮಿಸುತಿದ್ದು ಇದೇ ಮೊದಲಬಾರಿ ಕಾಗೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದೆ.
ಈ ಘಟನೆಯಿಂದಾಗಿ ವನ್ಯಜೀವಿಗಳು ಜನವಸತಿ ಪ್ರದೇಶಗಳಿಗೆ ಬರುತ್ತಿರುವ ಬಗ್ಗೆ ಕಳವಳ ವ್ಯಕ್ತವಾಗಿದೆ. ಇತ್ತೀಚೆಗೆ ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆಯೊಂದು ಕಾಣಿಸಿಕೊಂಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಚಿರತೆಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು, ಉದ್ಯೋಗಿಗಳ ಸುರಕ್ಷತೆಗಾಗಿ ಕಂಪೆನಿ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.