ಮಂಡ್ಯದಲ್ಲಿ ಕುಮಾರಸ್ವಾಮಿ ಮೊದಲು ಗೆಲ್ಲಲಿ ನೋಡೋಣ: ಸಚಿವ ಜಮೀರ್‌ ಸವಾಲು
x

ಮಂಡ್ಯದಲ್ಲಿ ಕುಮಾರಸ್ವಾಮಿ ಮೊದಲು ಗೆಲ್ಲಲಿ ನೋಡೋಣ: ಸಚಿವ ಜಮೀರ್‌ ಸವಾಲು


'ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಮೊದಲು ಗೆಲ್ಲಲಿ ನೋಡೋಣ. ಆನಂತರ ಕೇಂದ್ರ ಸಚಿವರಾಗುವ ಮಾತು' ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್ ಖಾನ್ ಸವಾಲು ಹಾಕಿದ್ದಾರೆ.

ಕೋಲಾರದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಮುಖಂಡರು ಹಾಗೂ ಮುಸ್ಲಿಂ ಸಮುದಾಯದವರ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ರಾಜ್ಯ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಈಗ ಭ್ರಮೆಯಲ್ಲಿದ್ದಾರೆ' ಎಂದು ವಾಗ್ದಾಳಿ ನಡೆಸಿದರು.

ʻʻಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ಮಂಡ್ಯದಲ್ಲಿ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲು ಇವರಿಗೆ ಸಾಧ್ಯವಾಗಲಿಲ್ಲ. ಈಗ ಗೆದ್ದು ಬರ್ತಾರಾ?ʼʼ ಎಂದು ಕೇಳಿದ್ದಾರೆ.

ಕಾಂಗ್ರೆಸ್‌ ಮುಖಂಡರು ಹಾಗೂ ಮುಸ್ಲಿಂ ಸಮುದಾಯದವರ ಸಭೆಯಲ್ಲಿ ಮಾತನಾಡಿದ ಅವರು ʻʻಈ ಬಾರಿ ಲೋಕಸಭೆ ಚುನಾವಣೆ ಅತ್ಯಂತ ಮಹತ್ವದ್ದು. ದೇಶದ ಭವಿಷ್ಯದ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿʼʼ ಎಂದು ಮನವಿ ಮಾಡಿದರು.

ʻʻಬಿಜೆಪಿಯವರು ಹಿಂದೂ ಮುಸ್ಲಿಂ ಎಂದು ಮತ ಕೇಳುತ್ತಿದ್ದಾರೆ. ಅವರಿಗೆ ಅಭಿವೃದ್ಧಿ ಬೇಕಿಲ್ಲ. ಹತ್ತು ವರ್ಷಗಳಲ್ಲಿ ಅವರ ಸಾಧನೆ ಶೂನ್ಯ. ಬಡವರ ಬ್ಯಾಂಕ್ ಖಾತೆಗೆ 15 ಲಕ್ಷ ಜಮೆ ಮಾಡುವುದು ಸೇರಿ ಯಾವ ಭರವಸೆಯೂ ಈಡೇರಿಸಲಿಲ್ಲʼʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʻʻದೇಶದಲ್ಲಿ ಈಗ ಯಾರ ಅಲೆಯೂ ಇಲ್ಲ. ಕೋಮುವಾದಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ಗೆ ಸಮುದಾಯ ಒಂದೂ ಮತ ಹಾಕಬಾರದು' ಎಂದು ಮನವಿ ಮಾಡಿದರು.

Read More
Next Story