ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ | ಬಿಟ್‌ಕಾಯಿನ್, PSI ಹಗರಣದಂತೆ ತನಿಖೆ ಹಳ್ಳ ಹಿಡಿಯದಿರಲಿ: ಯತ್ನಾಳ್‌
x
ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿಕ್ರಿಯಿಸಿದ್ದಾರೆ.

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ | ಬಿಟ್‌ಕಾಯಿನ್, PSI ಹಗರಣದಂತೆ ತನಿಖೆ ಹಳ್ಳ ಹಿಡಿಯದಿರಲಿ: ಯತ್ನಾಳ್‌

ಬಿಟ್ ಕಾಯಿನ್ ಹಾಗೂ ಪಿಎಸ್‌ಐ ಹಗರಣದ ತನಿಖೆಯಂತೆ ಗಾಳಿಯಲ್ಲಿ ಗುಂಡು ಹಾರಿಸದೆ ರಾಜ್ಯ ಸರ್ಕಾರ, ಈ ಪ್ರಕರಣವನ್ನಾದರೂ ನ್ಯಾಯಯುತವಾಗಿ ತನಿಖೆ ನಡೆಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ


Click the Play button to hear this message in audio format

ಬೆಂಗಳೂರು: ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಪ್ರತಿಕ್ರಿಯಿಸಿದ್ದಾರೆ.

'ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ ಸಂಪೂರ್ಣ ತನಿಖೆಯನ್ನು ನಡೆಸಿ ಕ್ರಮಕೈಗೊಳ್ಳಲಿ. ಬಿಟ್ ಕಾಯಿನ್ ಹಾಗೂ ಪಿಎಸ್‌ಐ ಹಗರಣದ ತನಿಖೆಯಂತೆ ಗಾಳಿಯಲ್ಲಿ ಗುಂಡು ಹಾರಿಸದೆ. ಸಂತ್ರಸ್ತೆಯರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ' ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸಿಲುಕಿರುವ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಿದ ಜೆಡಿಎಸ್ ನಿರ್ಧಾರವನ್ನು ಬಿಜೆಪಿ ಸ್ವಾಗತಿಸಿದೆ.

ಆರೋಪಿ ವಿರುದ್ಧ ಕಾನೂನಿನ ಸಂಪೂರ್ಣ ಬಲ ಪ್ರಯೋಗಿಸಿ, ಕಠಿಣ ಕ್ರಮಕ್ಕೆ ಬಿಜೆಪಿ ಒತ್ತಾಯಿಸುತ್ತದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

ಮಹಿಳೆಯರ ವಿರುದ್ಧದ ಅಪರಾಧಗಳ ಬಗ್ಗೆ ಬಿಜೆಪಿ ಶೂನ್ಯ ಸಹಿಷ್ಣುತೆ ಹೊಂದಿದೆ. ಇದೇ ವೇಳೆ, ಕಾಂಗ್ರೆಸ್ ದ್ವಂದ್ವ ನೀತಿ ಪ್ರದರ್ಶಿಸುತ್ತಿದ್ದು, ಅನುಕೂಲಕ್ಕೆ ತಕ್ಕಂತೆ ವರ್ತಿಸುತ್ತಿದೆ ಎಂದು ದೂರಿದ್ದಾರೆ. ಕೆಲವು ತಿಂಗಳ ಹಿಂದೆಯೇ ಲೈಂಗಿಕ ಹಗರಣದ ಬಗ್ಗೆ ಕರ್ನಾಟಕಕ್ಕೆ ಸರ್ಕಾರಕ್ಕೆ ತಿಳಿದಿದ್ದರೂ ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಿಲ್ಲವೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.

Read More
Next Story