ಮುನ್ನೆಚ್ಚರಿಕೆ ಕ್ರಮವಾಗಿ ಪಂಚಮಸಾಲಿ ಪ್ರತಿಭಟನಾಕಾರರ ಮೇಲೆ ಲಾಟಿ ಪ್ರಹಾರ: ಡಾ. ಜಿ ಪರಮೇಶ್ವರ್
ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಬಾರದು ಕೋರ್ಟ್ ನಿಯಮವಿದೆ. ಆದರೆ ಕೋರ್ಟ್ ಆದೇಶ ಮೀರಿ ಸುವರ್ಣ ಸೌಧಕ್ಕೆ ಮುತ್ತಿಗೆ ಹೊರಟ ಹೋರಾಟಗಾರರನ್ನುಹಿಮ್ಮೆಟ್ಟಿಸಲು ಕ್ರಮವಾಗಿ ಲಘು ಲಾಟಿ ಪ್ರಹಾರ ಆಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಪಂಚಮಸಾಲಿ ಸಮಯದಾಯದವರು ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಅವರ ಪ್ರತಿಭಟನೆಯ ಹಕ್ಕು. ಆದರೆ ಈ ಹೋರಾಟಕ್ಕೆ ಜಿಲ್ಲಾಡಳಿತ ಕೆಲವೊಂದು ನಿಯಮ ಮಾಡಿದೆ. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಬಾರದು ಎಂದು ಕೋರ್ಟ್ ನಿಯಮವಿದೆ. ಆದರೆ ಕೋರ್ಟ್ ಆದೇಶ ಮೀರಿ ಸುವರ್ಣ ಸೌಧಕ್ಕೆ ಮುತ್ತಿಗೆ ಹೊರಟ ಹೋರಾಟಗಾರರ ಮೇಲೆ ಮುನ್ನೆಚ್ಚರಿಕೆ ಕ್ರಮವಾಗಿ ಲಘು ಲಾಟಿ ಪ್ರಹಾರ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಯದಾಯದವರು ಸ್ವಾಮೀಜಿ ನೇತೃತ್ವದಲ್ಲಿ ಟ್ರ್ಯಾಕ್ಟರ್ ತೆಗೆದುಕೊಂಡು ಮುತ್ತಿಗೆ ಹಾಕುತ್ತೇವೆ ಎಂದರು. ಕೋರ್ಟ್ ನಲ್ಲಿ ಟ್ರ್ಯಾಕ್ಟರ್ ಬೇಡ ಎಂದು ಆದೇಶ ಬಂತು. ಟ್ರ್ಯಾಕ್ಟರ್ ಬದಲು ಟ್ರ್ಯಾಕ್ಸ್ ಬಳಸುವುದಕ್ಕೆ ನಾವು ಅವಕಾಶ ನೀಡಿದ್ದೆವು. ಮುಖ್ಯಮಂತ್ರಿಗಳೇ ಸ್ಥಳಕ್ಕೆ ಬರಬೇಕು ಎಂದು ಹೋರಾಟಗಾರರು ಪಟ್ಟು ಹಿಡಿದರು. ಆದರೆ ವಿಧಾನಸೌಧಕ್ಕೆ ಚಲೋ ಮಾಡಲು ಸ್ವಾಮೀಜಿ ಕರೆ ನೀಡಿದರು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಬಾರದು ಎಂದು ಹೇಳಲಾಗಿತ್ತು. ಆದರೆ ಕೋರ್ಟ್ ಆದೇಶ ಮೀರಿ ಮುತ್ತಿಗೆ ಹಾಕಲು ಹೊರಟಾಗ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸ್ವಾಮೀಜಿಗಳು ಎಲ್ಲಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರು ಕಾನೂನು ಅನ್ನು ಪಾಲಿಸಬೇಕು. ನಮ್ಮಲ್ಲಿ ತಪ್ಪಾಗಿದ್ದರೆ ಕ್ಷಮೆ ಕೇಳಬಹುದು. ಆದರೆ ನಿಯಮ ಉಲ್ಲಂಘನೆ ಮಾಡಿವರು ಯಾರು? ಪಂಚಮಸಾಲಿ ಹೋರಾಟಗಾರರು ಕಾನೂನು ಕೈಗೆತ್ತಿಕೊಂಡರು. ಕಾನೂನು ಕೈಗೆತ್ತಿಕೊಂಡಾಗ ಲಾಠಿ ಚಾರ್ಜ್ ಅನಿವಾರ್ಯ ಆಯ್ತು ಎಂದು ಅವರು ತಿಳಿಸಿದರು.
ನಾವು ಸಚಿವರನ್ನು ಪ್ರತಿಭಟನೆ ಸ್ಥಳಕ್ಕೆ ಕಳಿಸಿದಾಗಲೂ ಅವರು ಒಪ್ಪಲಿಲ್ಲ. ಹೋರಾಟಗಾರರು ತಾವೇ ಮೊದಲು ಚಪ್ಪಲಿ ಕಲ್ಲು ಎಸೆದರು. ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದಾಗ ತಡೆಯುವುದು ಅನಿವಾರ್ಯ. ಹೀಗೆ ಮುತ್ತಿಗೆ ಹಾಕಲು ಅವಕಾಶ ನೀಡಿದರೆ ನಾಳೆ ಎಲ್ಲರೂ ಮುತ್ತಿಗೆ ಹಾಕಲು ಬರುತ್ತಾರೆ. ಕೋರ್ಟ್ ತಡೆಯಾಜ್ಞೆ ಇದ್ದಾಗಲೂ ನಿರ್ಬಂಧದ ನಿಯಮಗಳನ್ನು ಸ್ವಾಮೀಜಿ ಸೇರಿದಂತೆ ಎಲ್ಲರೂ ಮುರಿದಿದ್ದಾರೆ. ಇದಕ್ಕೆ ಸಂಬಂಧಿಸಿ ನಮ್ಮ ಬಳಿಯೂ ವೀಡಿಯೋ ದಾಖಲೆಗಳು ಫೋಟೋ ಗಳು ಇವೆ. ಸುಮ್ಮ ಸುಮ್ಮನೆ ನಾವು ಲಾಠಿ ಚಾರ್ಜ್ ಮಾಡಿಲ್ಲ ಎಂದು ಡಾ. ಜಿ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.