ಗಂಗಾ ಆರತಿಯಂತೆ ಕಾವೇರಿಗೂ  ಆರತಿ!
x

ಗಂಗಾ ಆರತಿಯಂತೆ ಕಾವೇರಿಗೂ ಆರತಿ!

ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು.


ವಾರಾಣಸಿಯಲ್ಲಿ ಗಂಗಾ ಆರತಿ ನಡೆಸಿದಂತೆ, ಕಾವೇರಿ ಆರತಿ ಕಾರ್ಯಕ್ರಮ ಪ್ರಾರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಕಾರ್ಯಕ್ರಮ ರೂಪಿಸಲು ನಿರ್ಧರಿಸಿವೆ.

ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಿದ್ದಾರೆ. ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸಲಿವೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಕಾವೇರಿ ನದಿಗೆ ವಾರಾಣಸಿಯಲ್ಲಿನ ಗಂಗಾ ನದಿಗೆ ಮಾಡಲಾಗುವ ಗಂಗಾ ಆರತಿಯ ಮಾದರಿಯಲ್ಲಿ ಆರತಿ ಕಾರ್ಯಕ್ರಮ ಆಯೋಜಿಸುವ ಸಂಬಂಧ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ ಬಳಿಕ ಡಿಸಿಎಂ ಪ್ರಸ್ತಾಪ ಮಾಡಿದ್ದು, ಕೂಡಲೇ ಸ್ಪಂದಿಸಿದ್ದಾರೆ.

"ದೇಶದ ಪವಿತ್ರ ನದಿಗಳಲ್ಲಿ ಕಾವೇರಿ ಕೂಡ ಒಂದು. ಭಾಗಮಂಡಲದಲ್ಲಿ ಉದಯವಾಗಿ ತಮಿಳುನಾಡಿ‌ನ ಮಾಯಿಲಾಡುತುರೈ ಜಿಲ್ಲೆಯ ಪುಂಪುರಃ ಎಂಬಲ್ಲಿ ಬಂಗಾಳಕೊಲ್ಲಿ ಸೇರುತ್ತದೆ. ನದಿಯು ರಾಜ್ಯದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ವ್ಯವಸಾಯ ಮಾಡಲು ಅನುಕೂಲವಾಗುತ್ತಿದೆ. ಕಾವೇರಿಯಿಂದ ಬೆಂಗಳೂರು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಸೇರಿ ಸುತ್ತಮುತ್ತಲಿನ ಜಿಲ್ಲೆಗಳ ಕೋಟ್ಯಂತರ ಜನರಿಗೆ ಕುಡಿಯುವ ನೀರು ಕೂಡ ಸಿಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳಿವೆ. ಅದರ ಜತೆಗೆ ತಮಿಳುನಾಡು, ಕೇರಳ ಹಾಗೂ ಪಾಂಡಿಚೇರಿ ರಾಜ್ಯಗಳಿಗೂ ಅನುಕೂಲವಾಗಿದೆ. ಉತ್ತರ ಪ್ರದೇಶದ ವಾರಣಾಸಿಯ ಪಕ್ಕ ಕಾಶಿಯ ವಿಶ್ವನಾಥ ದೇವಾಲಯದ ಪಕ್ಕ ಗಂಗಾ ಆರತಿ ಮಾಡಲಾಗುತ್ತದೆ. ಅದೇ ಮಾದರಿಯಲ್ಲಿ ನಮ್ಮ ಪವಿತ್ರ ಕಾವೇರಿ ನದಿಗೂ ಆರತಿ ಮಾಡಬೇಕು, ಎಂದು ದಿನೇಶ್‌ ಗೂಳಿಗೌಡ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕರಾದ ದಿನೇಶ್ ಗೂಳಿಗೌಡ ಅವರು, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು, ನನ್ನ ಮನವಿಗೆ ಓಗೊಟ್ಟು, ಕಾವೇರಿ ಪೂಜೆ ಮಾಡುವ ನಿಟ್ಟಿನಲ್ಲಿ ಅಧ್ಯಯನ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಮೈಸೂರು, ಮಡಿಕೇರಿ, ಮಂಡ್ಯ ಜಿಲ್ಲೆಗಳ ಹಿರಿಯ ಶಾಸಕರು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ತಂಡವನ್ನು ವಾರಾಣಸಿಗೆ ಕಳಿಸುವುದಾಗಿ ತಿಳಿಸಿದ್ದಾರೆ. ಈ ತಂಡವು ಅಧ್ಯಯನ ಮಾಡಿ ವರದಿ ಕೊಡಲು ಸೂಚಿಸಿದ್ದಾರೆ. ಜೊತೆಗೆ ಅಲ್ಲಿಂದ ಒಂದು ತಂಡವನ್ನು ಕರೆದುಕೊಂಡು ಬಂದು ಯಾವ ಜಾಗದಲ್ಲಿ ಕಾವೇರಿ ಆರತಿ ನಡೆಸಬಹುದು ಎಂದು ಜಾಗ ಗುರುತಿಸಲಾಗುವುದು. ಒಂದು ತಿಂಗಳ ಒಳಗಾಗಿ ಈ ಕಾರ್ಯಕ್ರಮ ಮಾಡಲಾಗುವುದು. ಧಾರ್ಮಿಕ ದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಇತರೇ ಇಲಾಖೆಗಳು ಜಂಟಿಯಾಗಿ ಈ ಕಾರ್ಯಕ್ರಮ ರೂಪಿಸುತ್ತವೆ ಎಂದು ಡಿಸಿಎಂ ತಿಳಿಸಿರುವುದು ನಿಜಕ್ಕೂ ಸಂತೋಷದ ವಿಷಯ ಎಂದು ತಿಳಿಸಿದರು.

ಕಾವೇರಿಗೆ ಬಾಗಿನ

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ʻʻವರುಣನ ಕೃಪೆ, ಚಾಮುಂಡೇಶ್ವರಿ ಅನುಗ್ರಹದಿಂದ ಕಾವೇರಿಗೆ ಬಾಗಿನ ಅರ್ಪಿಸುವ ಕಾಲ ದೊರೆತಿದೆ. ಕಳೆದ ವರ್ಷ ಕಷ್ಟದಲ್ಲಿ ಇದ್ದೆವು. ಆದರೂ ರೈತರನ್ನು ಕಾಪಾಡಿದ್ದೇವೆ. ಕಳೆದ ವರ್ಷ 200 ತಾಲೂಕುಗಳಲ್ಲಿ ಬರಗಾಲವಿತ್ತು. ಕಾವೇರಿ ಪ್ರಾಧಿಕಾರ ಆದೇಶದ ಪ್ರಕಾರ 40 ಟಿಎಂಸಿ ಬಿಡಬೇಕಿತ್ತು. ಆದರೆ 20 ಟಿಎಂಸಿ ಬಿಡಲು ಹೇಳಿತ್ತು. ಅಷ್ಟನ್ನೂ ನಾವು ಬಿಡಲಿಲ್ಲ. ಕೆಲವರು ನೀರು ಬಿಟ್ಟಿದ್ದೇವೆ ಎಂದು ವಾದ ಮಾಡಿದ್ದಾರೆ. ನಾವು ಎಲ್ಲರನ್ನು ಕರೆದು ಚರ್ಚೆ ಮಾಡಿದ್ದೇವೆ. ಆನಂತರ ನೀರು ಬಿಟ್ಟಿದ್ದೇವೆ. 30 ಟಿಎಂಸಿ ನೀರು ತಮಿಳುನಾಡಿಗೆ ತಲುಪಿಸಿದ್ದೇವೆ. ಇನ್ನು ಹತ್ತು ಟಿಎಂಸಿ ನೀರು ಬಿಡಬೇಕು. ಈ ವರ್ಷದ ಕೋಟಾ ಮುಗಿಯುತ್ತದೆ. 50 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಆದೇಶವನ್ನು ಪಾಲನೆ ಮಾಡಿದ್ದೇವೆʼʼ ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ʻʻಕಾವೇರಿ ಜಲಾನಯನ ಪ್ರದೇಶದಲ್ಲಿ 1657 ಕೆರೆಗಳು ಇವೆ. ಎಲ್ಲ ಕೆರೆಗಳನ್ನು ತುಂಬಿಸಲು ಕಾರ್ಯಕ್ರಮ ರೂಪಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎರಡು ಲಕ್ಷ ಹೆಕ್ಟರ್ ಬಿತ್ತನೆ ಗುರಿ ಹೊಂದಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರದ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ 25 ಕೋಟಿ ರೂ. ಸಾಲ ಕೂಡ ನೀಡಲಾಗುತ್ತಿದೆ. ರೈತರ ಪರವಾಗಿ ನಮ್ಮ ಬದ್ಧತೆ ಇದೆʼʼ ಎಂದು ಡಿಕೆ ಶಿವಕುಮಾರ್ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್‌ರಿಂದಲೇ ಡ್ಯಾಂಗಳು ತುಂಬಿ ತುಳುಕುತ್ತಿವೆ: ಕುಮಾರಸ್ವಾಮಿ ವ್ಯಂಗ್ಯ

ಕೆಆರ್‌ಎಸ್‌ ಡ್ಯಾಂ ತುಂಬಿ 123 ಅಡಿವರೆಗೆ ಬಂದಿದೆ . ಒಂದು ಅಡಿ ನೀರು ಬಂದರೂ ರಾಜ್ಯದ ಹೆಮ್ಮೆಯ ಕೃಷ್ಣರಾಜ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ. ಜುಲೈ 27ಕ್ಕೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ಹೀಗಾಗಿ ಇವತ್ತು ಆ ಕಾರ್ಯಕ್ರಮದ ಸಿದ್ಧತೆಯನ್ನ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‌ ಪರಿಶೀಲಿಸಿದರು. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಕೆಆರ್​ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಗ್ಗೆ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರಿಂದಲೇ ಇಂದು ಡ್ಯಾಂಗಳು ತುಂಬಿ ತುಳುಕುತ್ತಿವೆ. ಗಂಗಾ ಆರತಿ ರೀತಿ ಕಾವೇರಿ ಆರತಿ ಮಾಡಿದರೆ ಒಳ್ಳೆಯ ವಿಚಾರ. 5-6 ದಿನದಿಂದ ತಮಿಳುನಾಡುಗೆ 5,6 ಟಿಎಂಸಿ ನೀರು ಹೋಗ್ತಿದೆ. ಜೂನ್, ಜುಲೈ ತಿಂಗಳಿನ ಪಾಲಿಗಿಂತ ಹೆಚ್ಚು ನೀರು ಹೋಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮಿಳುನಾಡು ಸಿಎಂ ಸ್ಟಾಲಿನ್​​​ಗೂ ನಾನು ಹೇಳಿದ್ದು ಇಷ್ಟೇ. ತಮಿಳುನಾಡು ಸಿಎಂ ಕರ್ನಾಟಕದ ಬಗೆಗಿನ ನಡವಳಿಕೆ‌ ತಿದ್ದುಕೊಳ್ಳಲಿ. ಕರ್ನಾಟಕ ತಮಿಳುನಾಡಿಗೆ ಯಾವತ್ತೂ ಸಮಸ್ಯೆ ಮಾಡಿಲ್ಲ. ನೀರು ಬಳಕೆ ಮಾಡುವ ದೃಷ್ಟಿಯಿಂದ ಮೇಕೆದಾಟು ಯೋಜನೆಗೆ ತಮಿಳುನಾಡು ಒಪ್ಪಬೇಕು. ರಾಜ್ಯ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರದ ಮಂತ್ರಿಗಳ ಬಗ್ಗೆ ಲಘುವಾಗಿ ಮಾತನಾಡ್ತಿದ್ದಾರೆ ಎಂದು ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Read More
Next Story