Lok Sabha Election 2024 | ಕರ್ನಾಟಕ ಬಿಜೆಪಿಯಿಂದ ಇಂದು ಅವಲೋಕನ ಸಭೆ ಸಭೆ
x
ಬಿಜೆಪಿ

Lok Sabha Election 2024 | ಕರ್ನಾಟಕ ಬಿಜೆಪಿಯಿಂದ ಇಂದು ಅವಲೋಕನ ಸಭೆ ಸಭೆ

ಕರ್ನಾಟಕ ಬಿಜೆಪಿಯಿಂದ ಇಂದು ಅವಲೋಕನ ಸಭೆ ನಡೆಯಲಿದೆ. ಈ ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯಲಿದೆ.


ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ನಿರ್ವಹಣೆಯ ಬಗ್ಗೆ ಕರ್ನಾಟಕ ಬಿಜೆಪಿಯಿಂದ ಶನಿವಾರ ಬೆಳಿಗ್ಗೆ 11ಕ್ಕೆ ಅವಲೋಕನ ಸಭೆಯನ್ನು ಆಯೋಜಿಸಲಾಗಿದೆ.

ಸಭೆಯಲ್ಲಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು ಎಷ್ಟು ಸ್ಥಾನದಲ್ಲಿ ಗೆಲ್ಲಲಿದ್ದಾರೆ. ಚುನಾವಣಾ ಕಾರ್ಯವೈಖರಿ ಹೇಗಿತ್ತು ಎನ್ನುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

28 ಲೋಕಸಭಾ ಕ್ಷೇತ್ರಗಳಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ, 3 ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸಿದೆ. ಒಟ್ಟಾರೆ ಮೈತ್ರಿ ಪಕ್ಷಗಳು ಎಷ್ಟು ಸ್ಥಾನದಲ್ಲಿ ಗೆಲ್ಲುವ ಸಾಧ್ಯತೆ ಇದೆ. ಯಾವೆಲ್ಲ ಕ್ಷೇತ್ರಗಳಲ್ಲಿ ಸುಲಭವಾಗಿ ಗೆಲುವು ಸಾಧಿಸಬಹುದು, ಯಾವೆಲ್ಲ ಕ್ಷೇತ್ರದಲ್ಲಿ ಸವಾಲು ಇದೆ ಎನ್ನುವುದು ಸೇರಿದಂತೆ ಒಟ್ಟಾರೆ ಚುನಾವಣಾ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯಲಿದೆ. ಈ ಎಲ್ಲ ಮಾಹಿತಿಗಳನ್ನು ಸಂಗ್ರಹಿಸಿ, ಬಿಜೆಪಿ ವರಿಷ್ಠರಿಗೆ ವರದಿ ಸಲ್ಲಿಸಲಾಗುತ್ತದೆ. ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರು ಹಾಗೂ ಬಿಜೆಪಿಯ ರಾಜ್ಯ ಮಟ್ಟದ ಪದಾಧಿಕಾರಿಗಳು ಭಾಗವಹಿಸುತ್ತಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ?

ಸಭೆಯಲ್ಲಿ ಕರ್ನಾಟಕದ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಬಗ್ಗೆಯೂ ಚರ್ಚೆ ನಡೆಯುಲಿದ್ದು, ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಕ್ಕೆ ಕಾರ್ಯತಂತ್ರ ರೂಪಿಸುವ ಸಾಧ್ಯತೆಯೂ ಇದೆ.

Read More
Next Story