Loksabha Election 2024 |ಬಿಜೆಪಿ ಪಟ್ಟಿ ಪ್ರಕಟ: ರಾಜ್ಯದ ಯಾರಿಗೆಲ್ಲಾ ಸಿಕ್ಕಿತು ಟಿಕೆಟ್?
ಒಟ್ಟು 28 ಕ್ಷೇತ್ರಗಳ ಪೈಕಿ ಎಂಟು ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಭಾರತೀಯ ಜನತಾ ಪಾರ್ಟಿ.
ಲೋಕಸಭೆ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟವಾಗಿದ್ದು, ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಮೈಸೂರಿನ ಸಂಸದ ಪ್ರತಾಪ ಸಿಂಹ, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಟಿಕೆಟ್ ತಪ್ಪಿದ್ದು, ಹೊಸ ಮುಖಗಳಾದ ಮೈಸೂರಿನ ರಾಜ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್, ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಹಾಗೂ ದೇವೇಗೌಡ ಅವರ ಅಳಿಯ ಸಿ.ಎನ್ ಮಂಜುನಾಥ್ ಸೇರಿದಂತೆ ಹಲವು ಹೊಸ ಮುಖಗಳಿಗೆ ಬಿಜೆಪಿ ಮಣೆ ಹಾಕಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಥಾನ ಪಲ್ಲಟವಾಗಿದ್ದು ಅವರನ್ನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ವರ್ಗಾಯಿಸಲಾಗಿದೆ. ಅವರು ಪ್ರತಿನಿಧಿಸುತ್ತಿದ್ದ ಉಡುಪಿ- ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬಿಜೆಪಿಯ 20 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ
ಚಿಕ್ಕೋಡಿ: ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ
ಬಾಗಲಕೋಟೆ: ಪಿ.ಸಿ ಗದ್ದಿಗೌಡರ
ಬಿಜಾಪುರ: ರಮೇಶ ಜಿಗಜಿಣಗಿ
ಕಲಬುರಗಿ: ಡಾ. ಉಮೇಶ್ ಜಾಧವ್
ಬೀದರ್: ಭಗವಂತ ಖೂಬಾ
ಕೊಪ್ಪಳ: ಬಸವರಾಜ ಕ್ಯಾವತ್ತೂರ
ಬಳ್ಳಾರಿ: ಶ್ರೀರಾಮುಲು
ಹಾವೇರಿ: ಬಸವರಾಜ ಬೊಮ್ಮಾಯಿ
ಧಾರವಾಡ: ಪ್ರಲ್ಲಾದ ಜೋಶಿ
ದಾವಣಗೆರೆ: ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ: ಬಿ.ವೈ ರಾಘವೇಂದ್ರ
ಉಡುಪಿ ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ: ಕ್ಯಾ.ಬ್ರಿಜೇಶ್ ಚೌಟ
ತುಮಕೂರು: ವಿ. ಸೋಮಣ್ಣ
ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ: ಎಸ್. ಬಾಲರಾಜ್
ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್
ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್
ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ