Mysore MUDA Case| ಲೋಕಾಯುಕ್ತ ತನಿಖೆ; ಸಿದ್ದರಾಮಯ್ಯ ಎದುರಿಸಲಿದ್ದಾರೆ ಮೊದಲ ವಿಚಾರಣೆ
ಮುಡಾ ಪ್ರಕರಣದ ಮೊದಲ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೊಟೀಸ್ ಜಾರಿ ಮಾಡಿದ್ದಾರೆ. ನ.6ರಂದು ಮೈಸೂರಿನ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಬರುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ.

ಪ್ರಕರಣದಲ್ಲಿಈಗಾಗಲೇ ಲೋಕಾಯುಕ್ತ ಪೊಲೀಸರು ಎಲ್ಲಾ ಆರೋಪಿಗಳ ವಿಚಾರಣೆ ಪೂರ್ಣಗೊಳಿಸಿದ್ದು, ಸಿಎಂ ವಿಚಾರಣೆ ಮಾತ್ರ ಬಾಕಿ ಇತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುದೀರ್ಘ ರಾಜಕಾರಣದಲ್ಲಿ ಇದೇ ಮೊದಲ ವಿಚಾರಣೆಯಾಗಿದೆ. ಪ್ರಕರಣದ ಎರಡನೇ ಆರೋಪಿಯಾದ ಸಿಎಂ ಅವರ ಪತ್ನಿ ಬಿ.ಎಂ ಪಾರ್ವತಿ ಅವರನ್ನು ಇತ್ತೀಚೆಗೆ ರಹಸ್ಯವಾಗಿ ಲೋಕಾಯುಕ್ತ ಪೊಲೀಸರು ಮೂರು ತಾಸುಗಳ ಕಾಲ ವಿಚಾರಣೆ ನಡೆಸಿದ್ದರು.
ಮೂರನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ, ನಾಲ್ಕನೇ ಆರೋಪಿ ದೇವರಾಜು ಸೇರಿ ಹಲವು ನಿವೃತ್ತ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿ, ಮಾಹಿತಿ ಕಲೆ ಹಾಕಿದ್ದಾರೆ. ಲೋಕಾಯುಕ್ತ ಪೊಲೀಸರು ಸಿಎಂ ಅವರನ್ನು ವಿಚಾರಣೆ ಮಾಡುತ್ತಿಲ್ಲ. ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ದೂರುದಾರರಾದ ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದರು.
ಮತ್ತೊಂದೆಡೆ ಇಡಿ ಅಧಿಕಾರಿಗಳು ಕೂಡ ತನಿಖೆ ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತರು, ಸಿಎಂ ಆಪ್ತರು ಹಾಗೂ ಉದ್ಯಮಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.