ಬಿಡಿಎ ಅಧಿಕಾರಿಗೆ ಲೋಕಾಯುಕ್ತ ಶಾಕ್! ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
x
ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ

ಬಿಡಿಎ ಅಧಿಕಾರಿಗೆ ಲೋಕಾಯುಕ್ತ ಶಾಕ್! ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರಿನ ಬಿಡಿಎ ಸರ್ವೆ ಸೂಪರ್‌ವೈಸರ್ ವೆಂಕಟೇಶ್ ಡಿ. ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯ ಸಂಪೂರ್ಣ ವಿವರ ಇಲ್ಲಿದೆ.


ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಯೊಬ್ಬರಿಗೆ ಬಿಸಿ ಮುಟ್ಟಿಸಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರ ವೆಂಕಟೇಶ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಬಿಡಿಎ ನೌಕರ ವೆಂಕಟೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.

1.50ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಕಚೇರಿಯ ಸರ್ವೆ ಸೂಪರ್‌ವೈಸರ್ ವೆಂಕಟೇಶ್ ಡಿ. ಅವರಿಗೆ ಸೇರಿದ ಐದು ವಿವಿಧ ಸ್ಥಳಗಳಲ್ಲಿ ಏಕಕಾಲಕ್ಕೆ ಶೋಧನಾ ಕಾರ್ಯ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ನಡೆದ ಈ ದಾಳಿಯಲ್ಲಿ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಪತ್ತೆಹಚ್ಚಿದ್ದಾರೆ.

ದಾಳಿಯಲ್ಲಿ ಪತ್ತೆಯಾದ ಆಸ್ತಿಯ ವಿವರ

ಸ್ಥಿರ ಆಸ್ತಿಗಳ ಅಂದಾಜು ಮೌಲ್ಯ: 90,77,000 ರೂ.

• ನಿವೇಶನಗಳು: ಒಟ್ಟು 07 ವಿವಿಧ ನಿವೇಶನಗಳು.

• ಮನೆ: 01 ವಾಸದ ಮನೆ.

• ಕೃಷಿ ಜಮೀನು: 06 ಎಕರೆ 20 ಗುಂಟೆ ಕೃಷಿ ಭೂಮಿ.

ಚರಾಸ್ತಿಗಳ ಅಂದಾಜು ಮೌಲ್ಯ: 62,82,410 ರೂ.

• ನಗದು: 2,000 ರೂ. ನಗದು ಪತ್ತೆ.

• ಚಿನ್ನಾಭರಣ: ಸುಮಾರು 29,00,410ರೂ. ಮೌಲ್ಯದ ಆಭರಣಗಳು.

• ವಾಹನಗಳು: 32,40,000 ರೂ. ಬೆಲೆಬಾಳುವ ವಿವಿಧ ವಾಹನಗಳು.

• ಬ್ಯಾಂಕ್ ಠೇವಣಿ: ಬ್ಯಾಂಕ್ ಠೇವಣಿ ಸೇರಿದಂತೆ 1,40,000 ರೂ. ಮೌಲ್ಯದ ಇತರೆ ವಸ್ತುಗಳು.

ಒಟ್ಟು ಆಸ್ತಿಯ ಮೌಲ್ಯ: ಈ ಶೋಧ ಕಾರ್ಯದಲ್ಲಿ ಈವರೆಗೆ ಒಟ್ಟು 1,53,59,410 ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

Read More
Next Story