ರಾಜ್ಯದ 8 ಜಿಲ್ಲೆಗಳಲ್ಲಿ 12 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ
x

ಕರ್ನಾಟಕ ಲೋಕಾಯುಕ್ತ

ರಾಜ್ಯದ 8 ಜಿಲ್ಲೆಗಳಲ್ಲಿ 12 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಈ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.


Click the Play button to hear this message in audio format

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳಿಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಏಕಕಾಲಕ್ಕೆ 12 ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಈ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಹಾವೇರಿ, ದಾವಣಗೆರೆ, ಹಾಸನ, ಕಲಬುರಗಿ, ಚಿತ್ರದುರ್ಗ, ಶಿವಮೊಗ್ಗ ಮತ್ತು ಬಾಗಲಕೋಟೆ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ದಾಳಿ ನಡೆದಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ನಿರ್ದೇಶಕಿ ವಿ. ಸುಮಂಗಲ, ಬಿಎಂಆರ್‌ಸಿಎಲ್‌ನ ಸರ್ವೇಯರ್ ಎನ್. ಕೆ. ಗಂಗಮರಿ ಗೌಡ, ಕೃಷಿ ಇಲಾಖೆಯ ಧೂಲಪ್ಪ, ಕೃಷಿ ಇಲಾಖೆಯ ಚಂದ್ರ ಕುಮಾರ್‌, ಕೆಆರ್‌ಐಡಿಎಲ್‌ನ ಎಇ ಜಗದೀಶ್ ನಾಯಕ್ ಸೇರಿದಂತೆ ಆರೋಗ್ಯ, ಸಾರಿಗೆ, ಪಂಚಾಯತ್ ರಾಜ್ ಮತ್ತು ಆಹಾರ ಇಲಾಖೆಗಳ ಒಟ್ಟು 12 ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ, ದಾವಣಗೆರೆ, ಹಾಸನ ಮತ್ತು ಕಲಬುರಗಿ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಈ ದಾಳಿಗಳು ನಡೆಯುತ್ತಿದ್ದು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಎಸ್‌.ಪಿ ವಾಸುದೇವರಾಮ್ ನೇತೃತ್ವದಲ್ಲಿ ಕೃಷಿ ಇಲಾಖೆ ಎಡಿ ಚಂದ್ರಕಾಂತ್‌ಗೆ ಸೇರಿದ ಎರಡು ಮನೆಗಳ ಮೇಲೆ ಶೋಧ ನಡೆಸಲಾಗಿದೆ. ಅದೇ ರೀತಿ, ದಾವಣಗೆರೆಯಲ್ಲಿ ಜಗದೀಶ್ ನಾಯ್ಕ ಮತ್ತು ನಡುವಿನಮನೆ ಅವರಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿಯಾಗಿದೆ ಮತ್ತು ಬೀದರ್‌ನ ಔರಾದ್‌ನಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ದೂಳಪ್ಪ ಅವರ ನಿವಾಸ ಮತ್ತು ಕಚೇರಿ ಸೇರಿದಂತೆ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆದಿದೆ. ಈ ದಾಳಿಗಳ ಮೂಲಕ ಆದಾಯಕ್ಕೂ ಮೀರಿದ ಅಕ್ರಮ ಆಸ್ತಿಗಳ ದಾಖಲೆಗಳು ಮತ್ತು ನಗದು, ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವ ನಿರೀಕ್ಷೆ ಇದೆ.

Read More
Next Story