Lokayuktha Raids | ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ದಾಳಿ
x
ಕರ್ನಾಟಕ ಲೋಕಾಯುಕ್ತ

Lokayuktha Raids | ಬೆಳ್ಳಂಬೆಳಿಗ್ಗೆ ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ದಾಳಿ

ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.


ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಿಗ್ಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಚಿಕ್ಕಬಳ್ಳಾಪುರದಲ್ಲಿ ಭೂ ಹಾಗೂ ಗಣಿ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮನೆ ಮೇಲೆ ದಾಳಿ ಮಾಡಲಾಗಿದೆ. ಕೃಷ್ಣವೇಣಿ ಪ್ಲಾಟ್​ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಯಲಹಂಕ ಬಳಿ ಇರೋ ಪ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ. ಕೃಷ್ಣವೇಣಿ ಅವರಿಗೆ ಸಂಬಂಧಿಸಿದಂತೆ ಮಂಗಳೂರು, ಮೈಸೂರು, ಬೆಂಗಳೂರಿನಲ್ಲಿ ಏಕಕಾಲದಲ್ಲಿ ದಾಳಿ ಮಾಡಿ ಆಸ್ತಿಗಳ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮಂಡ್ಯದಲ್ಲಿ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಂಗಳೂರಿನ ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಎಂಡಿ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹೇಶ್ ವಿರುದ್ಧ ಹಲವು ದೂರು ಬಂದ ಹಿನ್ನೆಲೆ ಮಂಡ್ಯ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕ ತಿಪ್ಪೇಸ್ವಾಮಿ ಮನೆಯ ಮೇಲೆ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಬೆಂಗಳೂರಿನ ಗಿರಿನಗರದ 4ನೇ ಫೇಸ್ ವಿಶ್ವೇಶ್ವರಯ್ಯ ರಸ್ತೆ ಬಂಗಲೆ ಮೇಲೆ ದಾಳಿ ನಡೆಸಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಬಂಗಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದು, ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತಿಪ್ಪೇಸ್ವಾಮಿ ಅವರಿಗೆ ಸಂಬಂಧಿಸಿದಂತೆ ದಾವಣಗೆರೆಯಲ್ಲೂ ದಾಳಿ ನಡೆದಿದೆ. ಚನ್ನಗಿರಿ ತಾಲೂಕಿನ ನಲ್ಕುದುರೆ ಗ್ರಾಮದಲ್ಲಿರುವ ತಿಪ್ಪೇಸ್ವಾಮಿ ಅವರ ಪತ್ನಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.

ಅಬಕಾರಿ ಇಲಾಖೆಯ ಎಸ್​ಪಿ ಮೋಹನ್‌ ಮನೆ ಮೇಲೆ‌ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ದಾಖಲೆಗಳು, ಆಸ್ತಿ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

ಕಳೆದ 10 ದಿನಗಳಲ್ಲಿ ಇದು ಲೋಕಾಯುಕ್ತದ ಎರಡನೇ ಪ್ರಮುಖ ಕಾರ್ಯಾಚರಣೆಯಾಗಿದೆ. ನವೆಂಬರ್ 12 ರಂದು ಲೋಕಾಯುಕ್ತರು ಎಂಟು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದು, 22.5 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿಯನ್ನು ಬಹಿರಂಗಪಡಿಸಿದ್ದಾರೆ.

Read More
Next Story