Diesel Price Hike | ಮುಂದಿನ ವಾರ ಲಾರಿ ಮುಷ್ಕರ; ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಆಕ್ರೋಶ
x
ಲಾರಿ ಮಷ್ಕರಕ್ಕೆ ಕರೆ ನೀಡಲಾಗಿದೆ. 

Diesel Price Hike | ಮುಂದಿನ ವಾರ ಲಾರಿ ಮುಷ್ಕರ; ಡೀಸೆಲ್‌ ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಆಕ್ರೋಶ

ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಜಾರಿಗೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಹಾಗಾಗಿ ಏ.5 ರಂದು ಸಭೆ ನಡೆಸಲಾಗುವುದು. ಮುಂದಿನ ವಾರದಿಂದಲೇ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.

ಡೀಸೆಲ್‌ ದರ ಲೀಟರ್‌ಗೆ 2 ರೂ. ಏರಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಲಾರಿ ಮಾಲೀಕರು ಮುಂದಿನ ವಾರ ರಾಜ್ಯಾದ್ಯಂತ ಮುಷ್ಕರ ಆರಂಭಿಸಲು ಸಿದ್ದರಾಗಿದ್ದಾರೆ. ಈ ಸಂಬಂಧ ನಾಳೆ(ಶನಿವಾರ) ಸಭೆ ಲಾರಿ ಮಾಲೀಕರ ಸಂಘದ ಪದಾಧಿಕಾರಿಗಳ ಸಭೆ ನಡೆಸಲಿದ್ದು, ಮುಷ್ಕರದ ರೂಪುರೇಷಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಜಾರಿಗೆ ಬಂದ ಬಳಿಕ ಎರಡು ಬಾರಿ ಡೀಸೆಲ್ ಬೆಲೆ ಹೆಚ್ಚಿಸಲಾಗಿದೆ. ಹಾಗಾಗಿ ಏ.5 ರಂದು ಸಭೆ ನಡೆಸಲಾಗುವುದು. ಮುಂದಿನ ವಾರದಿಂದಲೇ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್. ಷಣ್ಮುಗಪ್ಪ ತಿಳಿಸಿದ್ದಾರೆ.

ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 2.73 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದಾಗಿ ರಾಜ್ಯದಲ್ಲಿ ಡೀಸೆಲ್‌ ದರ 2 ರೂ.ಹೆಚ್ಚಳವಾಗಿದೆ. ಏ.1ರಿಂದಲೇ ದರ ಹೆಚ್ಚಳ ಜಾರಿಗೆ ಬಂದಿದ್ದು, ಬೆಂಗಳೂರಿನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್​ಗೆ 91.02 ರೂ.ಆಗಿದೆ. ಇದರಿಂದ ಲಾರಿ ಮಾಲೀಕರು ಹಾಗೂ ಲಾರಿ ಉದ್ಯಮ ಅವಲಂಬಿತರು ಸಮಸ್ಯೆ ಎದುರಿಸಬೇಕಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಹುತೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿದೆ. ದರ ಏರಿಕೆಯಿಂದ ಮತ್ತಷ್ಟು ಸಮಸ್ಯೆ ಎದುರಿಸುವಂತಾಗಿದೆ. ಅಗತ್ಯ ವಸ್ತುಗಳ ಸಾಗಣೆ ದರ ಹೆಚ್ಚಳವಾದಲ್ಲಿ ಮತ್ತೆ ಬೆಲೆ ಏರಿಕೆಯ ಹೊಡೆತ ಬೀಳಲಿದೆ.ಲಾರಿ ಮುಷ್ಕರದಿಂದ ಅಗತ್ಯ ವಸ್ತುಗಳ ಪೂರೈಕೆ ಮೇಲೆಯೂ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಮಾಲೀಕರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹಾಲು, ವಿದ್ಯುತ್‌ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಸಿದೆ. ಈಗಾಗಲೇ ದರ ಏರಿಕೆಯಿಂದ ಬಳಲಿದ್ದ ಸಾರ್ವಜನಿಕರು ಮತ್ತಷ್ಟು ದರ ಏರಿಕೆಯಿಂದಾಗಿ ಬಸವಳಿಯುವಂತಾಗಿದೆ.

Read More
Next Story