
ಸಾಂದರ್ಭಿಕ ಚಿತ್ರ
ಕಲಬುರಗಿ | ಆಳಂದ ತಾಲ್ಲೂಕಿನಲ್ಲಿ 2.3 ತೀವ್ರತೆಯ ಲಘು ಭೂಕಂಪ
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಗುರುವಾರ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ ಬೆಳಿಗ್ಗೆ 8 .17 ರ ಸುಮಾರಿಗೆ ಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ ದಾಖಲಾಗಿದೆ.
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಜವಲ್ಗಾ ಗ್ರಾಮದ ಆಗ್ನೇಯ ಭಾಗದ 0.5 ಕಿ.ಮೀ ದೂರದಲ್ಲಿ 2.3 ತೀವ್ರತೆಯ ಲಘು ಭೂಕಂಪವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಗುರುವಾರ ತಿಳಿಸಿದೆ.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಗುರುವಾರ ಬೆಳಿಗ್ಗೆ 8.17 ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ಕಂಪನದ ತೀವ್ರತೆ ದಾಖಲಾಗಿದೆ.
ಈ ಬಗ್ಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರ ಜೊತೆ ಸಭೆ ನಡೆಸಿದರು. ಲಘು ಭೂಕಂಪದಿಂದ ಯಾರೂ ಕೂಡ ಆತಂಕಕ್ಕೆ ಒಳಗಾಗದಂತೆ ಗ್ರಾಮಸ್ಥರಿಗೆ ಧೈರ್ಯ ಹೇಳಿದರು.
ಇದು ಭೂಕಂಪ ಕೇಂದ್ರದಿಂದ 20-25 ಕಿ.ಮೀ ವ್ಯಾಪ್ತಿಯಲ್ಲಿ ಕಂಪನ ಅನುಭವವಾಗುವ ಸಾಧ್ಯತೆ ಇದೆ. ಆದರೆ, ತೀವ್ರತೆ ಕಡಿಮೆಯಾಗಿರುವುದರಿಂದ ಸ್ಥಳೀಯ ಜನರಿಗೆ ಯಾವುದೇ ತೊಂದರೆಯಾಗಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಮಾತ್ರ ಸಣ್ಣ ಮಟ್ಟಿನ ಕಂಪನಗಳು ಕಾಣಿಸಿಕೊಳ್ಳಬಹುದು ಎಂದು ಇಲಾಖೆ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಭೂಕಂಪ ವಲಯ–III ಅಡಿ ಬರುತ್ತದೆ. ಟೆಕ್ಟೋನಿಕ್ ನಕ್ಷೆಯ ಪ್ರಕಾರ, ಈ ಪ್ರದೇಶದಲ್ಲಿ ಯಾವುದೇ ರಚನಾತ್ಮಕ ಸ್ಥಗಿತಗಳಿಲ್ಲವೆಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಲಾಗಿದೆ.