
ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ದೇವಾಲಯ (ಎಕ್ಸ್ ಖಾತೆಯಿಂದ)
ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಮೂವರಿಗೆ ಮಂತ್ರಾಲಯ ಮಠದಿಂದ ಪರಿಹಾರ ಘೋಷಣೆ
ಉಗ್ರರ ದಾಳಿಯಲ್ಲಿ ಮೃತಪಟ್ಟವರೆಲ್ಲಾ ನಮ್ಮವರೇ, ನಮ್ಮ ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡ ನೋವು ನಮಗಿದೆ. ಮೃತರು ಹಾಗೂ ಗಾಯಾಳುಗಳ ಕುಟುಂಬದ ಜತೆಗೆ ನಾವಿದ್ದೇವೆ ಎಂದು ಶ್ರೀಗಳು ಧೈರ್ಯ ತುಂಬಿದರು.
ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕರ್ನಾಟಕದ ಮೂವರು ಪ್ರವಾಸಿಗರ ಕುಟುಂಬಕ್ಕೆ ಮಂತ್ರಾಲಯ ಮಠದ ಗುರುಗಳಾದ ಸುಭುದೇಂದ್ರತೀರ್ಥ ಸ್ವಾಮೀಜಿ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು, ಮೃತರ ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಯನ್ನು ಮಂತ್ರಾಲಯ ವಹಿಸಿಕೊಳ್ಳಲಿದೆ ಎಂದರು.
ಉಗ್ರರ ದಾಳಿಯಲ್ಲಿ ಮೃತಪಟ್ಟವರೆಲ್ಲಾ ನಮ್ಮವರೇ, ನಮ್ಮ ಕುಟುಂಬದಲ್ಲಿ ಒಬ್ಬರನ್ನು ಕಳೆದುಕೊಂಡ ನೋವು ನಮಗಿದೆ. ಹೀಗಾಗಿ ಮೃತರು ಹಾಗೂ ಗಾಯಾಳುಗಳ ಕುಟುಂಬದ ಜತೆಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದರು.
ದೇಶದಲ್ಲಿ ಅಶಾಂತಿಯನ್ನು ನಿರ್ಮಿಸಲು ಹಲವಾರು ಮಂದಿ ಯತ್ನಿಸುತ್ತಿದ್ದು ಅದಕ್ಕೆ ನಾವು ಅವಕಾಶ ನೀಡಬಾರದು. ಎಲ್ಲರೂ ಸೇರಿ ದೇಶದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಕರ್ನಾಟಕದ ಮೂವರು ಸೇರಿದಂತೆ 26 ಜನರು ಮರಣ ಹೊಂದಿದ್ದು ಹಲವು ಮಂದಿ ಗಾಯಗೊಂಡಿದ್ದರು. ಶಿವಮೊಗ್ಗದ ಮಂಜುನಾಥ್ ರಾವ್ ಹಾಗೂ ಹಾವೇರಿ ಮೂಲದ ಸಾಪ್ಟ್‌ವೇರ್ ಉದ್ಯಮಿ ಭರತ್ ಭೂಷಣ್ ಅವರಿಗೆ ರಾಜ್ಯ ಸರ್ಕಾರ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿತ್ತು.
ಉಗ್ರರ ದಾಳಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ, ವೀಸಾ ರದ್ದತಿ ಹಾಗೂ ಸಿಂಧೂ ನದಿ ಜಲ ಒಪ್ಪಂದ ರದ್ದತಿ ಸೇರಿದಂತೆ ಪ್ರಮುಖ ಐದು ನಿರ್ಣಯಗಳನ್ನು ತೆಗೆತುಕೊಂಡಿತ್ತು. ಈಗಾಗಲೇ ರಾಜ್ಯಗಳಲ್ಲಿ ನೆಲೆಸಿರುವ ಅಧಿಕೃತ ಹಾಗೂ ವೀಸಾ ಅವಧಿ ಮುಗಿದಿರುವ ಅನಧಿಕೃತ ಪಾಕ್ ಪ್ರಜೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.