ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ
ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಬುಧವಾರ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಬುಧವಾರ ರಾಜೀನಾಮೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ವಿಕಾಸಸೌಧದಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪಾ ಚೋಳನ್ಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮರಿಗೌಡ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು, ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ನನ್ನ ಆರೋಗ್ಯವು ಸರಿಯಿಲ್ಲ, ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ. ಮುಡಾ ತನಿಖೆ ನಡೆಯುತ್ತಿದೆ, ತನಿಖೆ ನಡೆಯಲಿ. ಅಕ್ರಮ ಆಗಿದೆಯಾ, ಇಲ್ಲ ಅಂತ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ, ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದು ಹೇಳಿದರು.
ರಾಜೀನಾಮೆಗೆ ಒತ್ತಡ ಇತ್ತ ಎಂಬ ಪ್ರಶ್ನೆಗೆ ಉತ್ತರಿಸಿದ ಮರಿಗೌಡ ಅವರು, ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತ ಹೇಳಿಲ್ಲ. ಎರಡು ಬಾರಿ ಸ್ಟ್ರೋಕ್ ಆಯ್ತು, ಆರೋಗ್ಯ ಸರಿಯಿಲ್ಲ, ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗುವುದಿಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ. ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದರು ಅನ್ನೋದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ.