ಅಶ್ಲೀಲ ವಿಡಿಯೊ ರೆಕಾರ್ಡ್‌... ಹನಿಟ್ರ್ಯಾಪ್‌ಗೆ ಬಲಿಯಾಯ್ತು ಮತ್ತೊಂದು ಜೀವ!
x
ಆತ್ಮಹತ್ಯೆಗೆ ಶರಣಾದ ಯುವಕ ಜಗನ್‌ ಮೋಹನ್‌

ಅಶ್ಲೀಲ ವಿಡಿಯೊ ರೆಕಾರ್ಡ್‌... ಹನಿಟ್ರ್ಯಾಪ್‌ಗೆ ಬಲಿಯಾಯ್ತು ಮತ್ತೊಂದು ಜೀವ!

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್‌ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಬ್ಲ್ಯಾಕ್‌ಮೇಲ್‌ಗೆ ಹೆದರಿದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


Click the Play button to hear this message in audio format

ಬೆಂಗಳೂರಿನ ಹೊರವಲಯದಲ್ಲಿರುವ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತಪಟ್ಟ ವಿದ್ಯಾರ್ಥಿ.

ನಗರದ ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ ಜಗನ್, ಕಾಲೇಜು ಸಮೀಪದಲ್ಲೇ ಇರುವ ಶಾಂತಿನಗರದಲ್ಲಿ ಬಾಡಿಗೆ ರೂಂ ಪಡೆದು ವಾಸವಾಗಿದ್ದರು. ಇದೀಗ ಅದೇ ಕೋಣೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಮೃತದೇಹದ ಪಕ್ಕದಲ್ಲಿ ದೊರೆತ ಡೆತ್ ನೋಟ್‌ನಲ್ಲಿ ಆತಂಕಕಾರಿ ವಿಷಯಗಳು ಬೆಳಕಿಗೆ ಬಂದಿವೆ. ವಿಡಿಯೋ ಕಾಲ್ ಮೂಲಕ ಕಿರುಕುಳ ನೀಡಿ ಬ್ಲಾಕ್‌ಮೇಲ್ ಮಾಡಿದ್ದಕ್ಕೆ ಹೆದರಿ ಈ ಕೃತ್ಯ ಎಸಗಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದೆ.

ಸಾವಿನ ಹಿಂದೆ ಬ್ಲಾಕ್‌ಮೇಲ್‌ ಶಂಕೆ

ಪೊಲೀಸರು ಘಟನಾ ಸ್ಥಳವನ್ನು ಪರಿಶೀಲಿಸಿದಾಗ, ಡೆತ್ ನೋಟ್‌ನಲ್ಲಿ ಮೂರು ದೂರವಾಣಿ ಸಂಖ್ಯೆಗಳನ್ನು ಉಲ್ಲೇಖಿಸಿರುವುದು ಪತ್ತೆಯಾಗಿದೆ. ಈ ಸಂಖ್ಯೆಗಳನ್ನು ಪರಿಶೀಲಿಸಿದಾಗ, ಫೇಕ್ ವಿಡಿಯೋ ಕಾಲ್ ಮೂಲಕ ಜಗನ್ ಅವರನ್ನು ಬೆತ್ತಲೆಗೊಳಿಸಿ ಅವರ ಫೋಟೋ ಮತ್ತು ವಿಡಿಯೋಗಳನ್ನು ಸೆರೆಹಿಡಿಯಲಾಗಿತ್ತು ಎಂಬುದು ತಿಳಿದುಬಂದಿದೆ. ಅಲ್ಲದೆ, ಈ ಅಶ್ಲೀಲ ಚಿತ್ರಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕುವ ಮೂಲಕ ಜಗನ್ ಅವರ ಮೇಲೆ ನಿರಂತರವಾಗಿ ಟಾರ್ಚರ್ ನೀಡಲಾಗಿತ್ತು.ಈ ಬ್ಲಾಕ್‌ಮೇಲ್‌ಗೆ ಹೆದರಿದ ಜಗನ್, ಆರೋಪಿಗಳಿಗೆ 25,000ರೂಪಾಯಿಗಳನ್ನು ವರ್ಗಾವಣೆ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.

ಹಣ ಕೊಟ್ಟ ನಂತರವೂ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಶಂಕೆಯಿದ್ದು, ಈ ಮಾನಸಿಕ ಹಿಂಸೆಯನ್ನು ತಾಳಲಾರದೆ ಜಗನ್ ಮೋಹನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ವಾಯುವ್ಯ ವಿಭಾಗದ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 106 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರೆಸಿದ್ದಾರೆ.

(ಆತ್ಮಹತ್ಯೆಗಳನ್ನು ತಡೆಯಲು ಸಾಧ್ಯ. ಸಹಾಯಕ್ಕಾಗಿ ದಯವಿಟ್ಟು ಆತ್ಮಹತ್ಯೆ ತಡೆ ಸಹಾಯವಾಣಿಗಳನ್ನು ಸಂಪರ್ಕಿಸಿ:1ಲೈಫ್‌: 7893078930; ಲೈಫ್‌ಲೈನ್ +91-9163940404 , +91-9088030303; ಸುಮೈತ್ರಿ - 011-23389090 , +91-9315767849 ; ನೇಹಾ ಆತ್ಮಹತ್ಯೆ ತಡೆ ಕೇಂದ್ರ : 044-24640050; ಆಸರಾ ಸಹಾಯವಾಣಿ ಆತ್ಮಹತ್ಯೆ ತಡೆ, ಭಾವನಾತ್ಮಕ ಬೆಂಬಲ ಮತ್ತು ಆಘಾತ ನೆರವು ಕೇಂದ್ರ: 91-9820466726; ಕಿರಣ್, ಮಾನಸಿಕ ಆರೋಗ್ಯ ಪುನರ್ವಸತಿ ಕೇಂದ್ರ: 1800-599-0019; ದಿಶಾ: 0471-2552056; ಮೈತ್ರಿ: 0484-2540530; ಮತ್ತು ಸ್ನೇಹಾ ಆತ್ಮಹತ್ಯೆ ತಡೆ ಸಹಾಯವಾಣಿ: 044-24640050)

Read More
Next Story