BJPs job is to abuse women: Minister Lakshmi Hebbalkar
x

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಧರ್ಮಸ್ಥಳ ಪ್ರಕರಣ | ಶೀಘ್ರವೇ ಸತ್ಯಾಸತ್ಯತೆ ಹೊರಬಲಿದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಸದನಕ್ಕೆ ಉತ್ತರ ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.


ಧರ್ಮಸ್ಥಳದ ಹೆಸರಿಗೆ ಕಳಂಕ ಬರಬಾರದು ಎಂಬ ಕಾರಣಕ್ಕೆ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಈ ಕುರಿತು ಶೀಘ್ರವೇ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಗೃಹ ಸಚಿವರು ಸದನಕ್ಕೆ ಉತ್ತರ ಕೊಟ್ಟಿದ್ದಾರೆ. ಅದಷ್ಟು ಬೇಗ ಸತ್ಯ ಹೊರಬರಲಿದೆ ಎಂದರು.

ಸೌಹಾರ್ದಯುತ ಸಭೆ

ಸಚಿವ ಈಶ್ವರ್‌ ಖಂಡ್ರೆ ಅವರ ನಿವಾಸದಲ್ಲಿ ನಡೆದ ಲಿಂಗಾಯತ ಸಚಿವರು ಹಾಗೂ ಶಾಸಕರ ಸಭೆ ಕುರಿತಂತೆ ಪ್ರತಿಕ್ರಿಯಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ನಿನ್ನೆ ಶ್ರಾವಣ ಸೋಮವಾರ ಆದ ಕಾರಣ ಎಲ್ಲಾ ವೀರಶೈವ-ಲಿಂಗಾಯತ ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡು ಊಟಕ್ಕೆ ಸೇರಿದ್ದೆವು. ಇದೊಂದು ಸೌಹಾರ್ದಯುತ ಸಭೆ ಆಗಿತ್ತು. ಕೇವಲ ಜಾತಿಗಣತಿ ವಿಷಯ ಅಲ್ಲ, ನಮ್ಮ ಸಮಾಜದ ಅಭಿವೃದ್ಧಿ ಬಗ್ಗೆಯೂ ಚರ್ಚೆ ನಡೆಯಿತು ಎಂದು ಹೇಳಿದರು.

Read More
Next Story