Lakshmi Hebbalkar | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ
x
ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತವಾಗಿದೆ.

Lakshmi Hebbalkar | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ.


ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ರಸ್ತೆ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಸಿಎಲ್​ಪಿ ಸಭೆ ಮುಗಿಸಿ ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನಲ್ಲಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಡ್ಡಬರುತ್ತಿದ್ದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಟೊಯೋಟಾ ಇನ್ನೋವಾ ಹೈಕ್ರಾಸ್ ಕಾರಿನ ಮುಂಭಾಗ ಸಂಪೂರ್ಣ ನಚ್ಚುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಪ್ರಾಣಾಪಾಯವಾಗಿಲ್ಲ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ದಾಖಲು ಮಾಡಿರುವ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಎಸ್​ಪಿ ಭೀಮಾಶಂಕರ್ ಗುಳೇದ್ ಅವರು ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಹೆಬ್ಬಾಳ್ಕರ್ ಅವರ ತಾಯಿ ಹಾಗೂ ಸಹೋದರಿ ಕೂಡ ಆಸ್ಪತ್ರೆಗೆ ದೌಡಾಯಿಸಿ ಬಂದಿದ್ದಾರೆ. ಗೃಹಸಚಿವ ಡಾ. ಜಿ ಪರಮೇಶ್ವರ್ ಅವರೂ ಕೂಡ ದೂರವಾಣಿ ಮೂಲಕ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ.

Read More
Next Story