ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೀತಿ ನಾಟಕ: ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲಿ ಅತ್ಯಾಚಾರ
x

ಇನ್‌ಸ್ಟಾಗ್ರಾಮ್‌ನಲ್ಲಿ ಪ್ರೀತಿ ನಾಟಕ: ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲಿ ಅತ್ಯಾಚಾರ

ಸಂತ್ರಸ್ತೆಯ ದೂರಿನ ಅನ್ವಯ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಆರೋಪಿ ಕೆಲ್ವಿನ್‌ನನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ.


ರಾಜ್ಯದಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾರಿನಲ್ಲೇ ಅತ್ಯಾಚಾರ ಎಸಗಿದ ಆರೋಪದಲ್ಲಿ ಒಬ್ಬ ಯುವಕನನ್ನು ಬಂಧಿಸಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಬೆಳೆಸಿಕೊಂಡು, ಪ್ರೀತಿಯ ನಾಟಕವಾಡಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ್ವಿನ್ (24) ಎಂಬ ಪೇಂಟಿಂಗ್ ವೃತ್ತಿ ಮಾಡುವ ಯುವಕ, ಇನ್‌ಸ್ಟಾಗ್ರಾಮ್‌ನಲ್ಲಿ ಅಪ್ರಾಪ್ತ ಬಾಲಕಿಯ ಪರಿಚಯ ಮಾಡಿಕೊಂಡಿದ್ದ. ಕೇವಲ ಏಳು ದಿನಗಳಲ್ಲಿ ಪ್ರೀತಿಸುವ ನೆಪದಲ್ಲಿ ಬಾಲಕಿಯನ್ನು ನಂಬಿಸಿ, ಸೋಮೇಶ್ವರ ಬೀಚ್ ಬಳಿ ಕರೆದುಕೊಂಡು ಹೋಗಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.

ಸಂತ್ರಸ್ತೆಯ ದೂರಿನ ಅನ್ವಯ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪೊಲೀಸರು ಆರೋಪಿ ಕೆಲ್ವಿನ್‌ನನ್ನು ಬಂಧಿಸಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ.

Read More
Next Story