ಬಾಲಕಿ ಕೊಲೆ ಪ್ರಕರಣ: ಆರೋಪಿ ಬಂಧನ
x
ಆರೋಪಿ ಪ್ರಕಾಶ್‌

ಬಾಲಕಿ ಕೊಲೆ ಪ್ರಕರಣ: ಆರೋಪಿ ಬಂಧನ

ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Click the Play button to hear this message in audio format

ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೊಡಗಿನ ಸೋಮವಾರಪೇಟೆಯ ಸೂರ್ಲಬ್ಬಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮೀನಾ (16) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಸೋಮವಾರಪೇಟೆ ತಾಲೂಕಿನ ಹಮ್ಮಿಯಾಳ ಗ್ರಾಮದ ಪ್ರಕಾಶ್‌ನನ್ನು (33) ಶನಿವಾರ ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಾಲಕಿಯನ್ನು ಕೊಂದು ರುಂಡದ ಸಮೇತ ಪರಾರಿಯಾಗಿದ್ದ. ಆದರೆ ಬಾಲಕಿಯ ರುಂಡ ಇನ್ನು ಪತ್ತೆಯಾಗಿಲ್ಲ.

ಏನಿದು ಘಟನೆ

ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿಯ ಸರಕಾರಿ ಪ್ರೌಢ ಶಾಲೆಯ 10ನೇ ತರಗತಿಯಲ್ಲಿದ್ದ ಏಕೈಕ ವಿದ್ಯಾರ್ಥಿನಿ ಯು.ಎಸ್. ಮೀನ ಈ ಬಾರಿಯ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದರು. ಇದರ ಸಂತೋಷದ ನಡುವೆಯೇ ಮನೆಯವರು ವಿದ್ಯಾರ್ಥಿನಿಗೆ ಪಕ್ಕದ ಹಮ್ಮಿಯಾಲ ಗ್ರಾಮದ ಪ್ರಕಾಶ್ (32) ಎಂಬಾತನೊಂದಿಗೆ ನಿಶ್ಚಿತಾರ್ಥ ಮಾಡಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಾಹಿತಿ ತಿಳಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ 18 ವರ್ಷದ ನಂತರ ವಿವಾಹ ಮಾಡುವಂತೆ ಕಾನೂನಿನ ಅರಿವು ಮೂಡಿಸಿದ್ದರು. ನಂತರ ಎರಡೂ ಮನೆಯವರು ಮೀನಾಳಿಗೆ 18 ವರ್ಷ ತುಂಬಿದ ಮೇಲೆ ವಿವಾಹ ಮಾಡಲು ನಿಶ್ಚಯಿಸಿದರು. ಇದರಿಂದ ಕುಪಿತಗೊಂಡ ಪ್ರಕಾಶ್ ಗುರುವಾರ ಸಂಜೆ ವೇಳೆ ಮೀನಾಳ ಮನೆಗೆ ಬಂದು ಆಕೆಯ ತಂದೆ, ತಾಯಿ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಮೀನಾಳನ್ನು ಸ್ವಲ್ಪ ದೂರ ಎಳೆದೊಯ್ದು ತಲೆಯನ್ನು ಕತ್ತರಿಸಿ ತಲೆ ಸಮೇತ ಪರಾರಿಯಾಗಿದ್ದ ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿ ಬಿರುಸಿನ ಕ್ರಮ ಕೈಗೊಂಡಿದ್ದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದೆವು. ಈ ವೇಳೆ ಬೆಳಿಗ್ಗೆ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿತು. ಕೂಡಲೇ ಆತನನ್ನು ಬಂಧಿಸಲಾಯಿತು. ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿರುವುದು ನಿಜ. ಆದರೆ ಬಾಲಕಿಯ ರುಂಡ ಇನ್ನೂ ಪತ್ತೆಯಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ.

Read More
Next Story