
ಶಾಸಕ ಎಸ್. ಸುರೇಶ್ ಕುಮಾರ್
ಆನ್‌ಲೈನ್ ಗೇಮಿಂಗ್‌ಗೆ ಕಡಿವಾಣ ಹಾಕಲು ಶಾಸಕ ಎಸ್. ಸುರೇಶ್ ಕುಮಾರ್ ಆಗ್ರಹ
ಆನ್‌ಲೈನ್ ಗೇಮಿಂಗ್‌ನಿಂದ ಯುವ ಸಮೂಹ ಹಾಳಾಗುತ್ತಿದೆ. ಇದರಿಂದ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದ್ದರಿಂದ ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್. ಸುರೇಶ್ ಕುಮಾರ್ ಒತ್ತಾಯಿಸಿದರು.
ಪ್ರಖ್ಯಾತ ವ್ಯಕ್ತಿಗಳು ರಮ್ಮಿ ಸರ್ಕಲ್ ಸೇರಿದಂತೆ ವಿವಿಧ ಆನ್‌ಲೈನ್ ಗೇಮಿಂಗ್ ಆಡುವಂತೆ ಜಾಹೀರಾತು ನೀಡಿ ಪ್ರಚೋದನೆ ಮಾಡುತ್ತಿದ್ದಾರೆ. ಇದರಿಂದ ಯುವ ಸಮೂಹ ಹಾಳಾಗುತ್ತಿದ್ದು, ಕೂಡಲೇ ಆನ್‌ಲೈನ್ ಗೇಮಿಂಗ್‌ಗೆ ಕಡಿವಾಣ ಹಾಕಬೇಕು ಎಂದು ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹಿಸಿದರು.
ಮಂಗಳವಾರ ಅಧಿವೇಶನದಲ್ಲಿ ಮಾತನಾಡಿದ ಅವರು, ಆನ್‌ಲೈನ್ ಗೇಮಿಂಗ್‌ನಿಂದ ಯುವ ಸಮೂಹ ಹಾಳಾಗುತ್ತಿದೆ. ಇದರಿಂದ ಬಹಳಷ್ಟು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದ್ದರಿಂದ, ಸರ್ಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರಶ್ನೋತ್ತರ ವೇಳೆಯಲ್ಲಿ ಸರ್ಕಾರಕ್ಕೆ ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸರ್ಕಾರ ಆನ್‌ಲೈನ್ ಗೇಮಿಂಗ್ ನಿರ್ಬಂಧಿಸಿ ಈಗಾಗಲೇ ತಿದ್ದುಪಡಿ ಕಾಯ್ದೆ ತಂದಿತ್ತು. ಆದರೆ ಅದನ್ನು ಸುಪ್ರೀಂಕೋರ್ಟ್‌ನಲ್ಲಿ ಆಲ್ ಇಂಡಿಯಾ ಗೇಮಿಂಗ್ ಫೆಡರೇಶನ್ ಪ್ರಶ್ನೆ ಮಾಡಿದೆ. ಆನ್‌ಲೈನ್ ಗೇಮಿಂಗ್ ಕುರಿತು ಐಪಿಎಸ್ ಹಿರಿಯ ಅಧಿಕಾರಿ ಪ್ರಣಬ್ ಮೊಹಂತಿ ನೇತೃತ್ವದಲ್ಲೂ ಸಮಿತಿ ಮಾಡಿದ್ದೇವೆ. ಸಮಿತಿ ವರದಿ ನೀಡಿದ ನಂತರ ಸುಪ್ರೀಂಕೋರ್ಟ್ ನಡೆ ನೋಡಿಕೊಂಡು ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಆನ್‌ಲೈನ್ ಗೇಮಿಂಗ್ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ, ಅಧಿವೇಶನ ಮುಗಿಯುವ ಒಳಗಾಗಿ ಅರ್ಧಗಂಟೆಯ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದರು.