MLC Election: ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಮತದಾನ ಆರಂಭ
x
ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಮತದಾನ ಆರಂಭವಾಗಿದೆ.

MLC Election: ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಮತದಾನ ಆರಂಭ

ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಒಟ್ಟು ಆರು ಸ್ಥಾನಗಳಿಗೆ ಇಂದು ( ಜೂನ್‌ 2) ಮತದಾನ ನಡೆಯುತ್ತಿದ್ದು, ಬೆಳಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದೆ.


Click the Play button to hear this message in audio format

ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಒಟ್ಟು ಆರು ಸ್ಥಾನಗಳಿಗೆ ಇಂದು ( ಜೂನ್‌ 2) ಮತದಾನ ನಡೆಯುತ್ತಿದ್ದು, ಬೆಳಗ್ಗೆ 8ಗಂಟೆಯಿಂದ ಮತದಾನ ಆರಂಭವಾಗಿದೆ. 3 ಪದವೀಧರ ಕ್ಷೇತ್ರ , 3 ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. 6 ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸಂಜೆ 4ರವರೆಗೆ ಮತದಾನ ನಡೆಯಲಿದೆ.

ಇನ್ನು ಇದರ ಫಲಿತಾಂಶ ಜೂನ್‌ 6ಕ್ಕೆ ಹೊರಬೀಳಲಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮರಿತಿಬ್ಬೇಗೌಡ, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಧನಂಜಯ ಸರ್ಜಿ, ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥ್, ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸೇರಿ ಒಟ್ಟು 78 ಅಭ್ಯರ್ಥಿಗಳು ತಮ್ಮ ಗೆಲುವಿಗೆ ಸೆಣಸಲಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳು ಕಣದಲ್ಲಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ಮಂದಿ ಸ್ಪರ್ಧಿಸುತ್ತಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಪೈಪೋಟಿಗಳಿದಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಡುವೆ ಗೆಲುವಿಗೆ ಪೈಪೋಟಿ ನಡೆಯುತ್ತಿದೆ.

ಪದವೀಧರ ಕ್ಷೇತ್ರದಲ್ಲಿ 2,01,632 ಪುರುಷರು, 161,907 ಮಹಿಳೆಯರು ಹಾಗೂ 34 ಇತರರು ಸೇರಿ ಒಟ್ಟು 3,63,573 ಮತದಾರರು ಇದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷರು, 31,954 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿ ಒಟ್ಟು 70,260 ಮತದಾರರಿದ್ದಾರೆ.

Read More
Next Story