Monsoon in full swing across the state, orange alert declared for six districts
x

ಸಾಂದರ್ಭಿಕ ಚಿತ್ರ

ರಾಜ್ಯಾದ್ಯಂತ ಮುಂಗಾರು ಚುರುಕು, ಆರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಲಿದ್ದು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.


ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರಾವಳಿ ಸೇರಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ವೇಳೆ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಭಾಗದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಉತ್ತಮ ಮಳೆಯಾಗಲಿದ್ದು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಿಳಿಸಿದೆ.

ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ​ಕೊಡಗಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜುಲೈ ಮೊದಲ ವಾರದವರೆಗೂ ರಾಜ್ಯಾದ್ಯಂತ ಮಳೆ ಅಬ್ಬರ ಇರಲಿದ್ದು ಕರವಾಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕಬಿನಿ, ಕೆಆರ್‌ಎಸ್‌ ಜಲಾಶಯಗಳ ಒಳ ಹರಿವು ಹೆಚ್ಚಿದ್ದು ಕೃಷಿ ಸಂಬಂಧಿತ ಕೆಲಸಗಳಿಗೆ ಯಾವುದೇ ಸಂದರ್ಭದಲ್ಲಿ ನದಿಗೆ ನೀರು ಬಿಡುವುದರಿಂದ ನದಿಪಾತ್ರದ ಜನರು ಎಚ್ಚರಿಕೆಯಿಂದಿರಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More
Next Story