More funds for Mysore development from Congress government than BJP
x

ಸಿಎಂ ಸಿದ್ದರಾಮಯ್ಯ

ಮೈಸೂರು ಅಭಿವೃದ್ಧಿ| ಪುತ್ರನ ಹೇಳಿಕೆ ಸಮರ್ಥಿಸಿಕೊಂಡ ಸಿಎಂ; ಕಾಂಗ್ರೆಸ್‌ ಸರ್ಕಾರದಲ್ಲೇ ಹೆಚ್ಚು ಅನುದಾನ

ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಪತ್ರ ಬರೆದಿರುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಕಾಂಗ್ರೆಸ್ ಸರ್ಕಾರವು ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಅನುದಾನ ನೀಡಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುತ್ರನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಹಾಸನದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿನ ಸರ್ವಾಂಗೀಣ ಅಭಿವೃದ್ಧಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಗಿಂತ ನಮ್ಮ ತಂದೆ ಕೊಡುಗೆ ಹೆಚ್ಚಿದೆ ಎಂದಿದ್ದ ತಮ್ಮ ಪುತ್ರನ ಹೇಳಿಕೆ ಕುರಿತಂತೆ ಜಾಣ್ಮೆಯಿಂದ ಸಮಜಾಯಿಷಿ ನೀಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಿಜೆಪಿಗಿಂತ ಹೆಚ್ಚು ಅಭಿವೃದ್ಧಿ ಮಾಡಿದೆ ಎಂದು ಹೇಳಿದ್ದಾರೆ.

ಸಂಸದ ಯದುವೀರ್‌ ತಿರುಗೇಟು

ಸಿಎಂ ಪುತ್ರ ಯತೀಂದ್ರ ಅವರ ಹೇಳಿಕೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆಗೆ ನಾಂದಿಯಾಡುವುದರ ಜತೆಗೆ ವಿಪಕ್ಷಗಳ ಟೀಕೆಗೆ ಗುರಿಯಾಗಿತ್ತು.

"ಮೈಸೂರು ಸಂಸ್ಥಾನವನ್ನು ಇಡೀ ವಿಶ್ವವೇ ಅಚ್ಚರಿಯಿಂದ ನೋಡುವಂತೆ ಮಾಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರಿಗೆ ಸಲ್ಲುತ್ತದೆ. ಅಂತಹ ಮಹಾನ್‌ ಆಡಳಿತಗಾರರ ಸಾಧನೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಗೌರವಿಸಿ ಸ್ಮರಿಸಬೇಕೇ ಹೊರತು ಬೇರೆಯವರೊಂದಿಗೆ ಹೋಲಿಕೆ ಮಾಡಬಾರದು. ಅಧಿಕಾರದಲ್ಲಿದ್ದೇವೆ ಎಂದು ಮಾಧ್ಯಮಗಳ ಮುಂದೆ ಏನು ಬೇಕಾದರು ಹೇಳಿಕೆ ನೀಡಬಾರದು" ಎಂದು ಮೈಸೂರು-ಕೊಡಗು ಸಂಸದ ಹಾಗೂ ರಾಜವಂಶಸ್ಥ ಯದುವೀರ್‌ ತಿರುಗೇಟು ನೀಡಿದ್ದರು.

ಅನುದಾನದ ಲಭ್ಯತೆ ಬಗ್ಗೆ ಪರಿಶೀಲನೆ

ಹಾಸನ ಮಹಾನಗರ ಪಾಲಿಕೆಗೆ ಇನ್ನೂ ಮೂರು ವರ್ಷ ಯಾವುದೇ ಅನುದಾನ ಅಥವಾ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ಆರ್ಥಿಕ ಇಲಾಖೆ ಅಧೀನ ಕಾರ್ಯದರ್ಶಿಗಳು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪರಿಶೀಲಿಸಲಾಗುವುದು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 750 ಕೋಟಿ ರೂ. ಗಳಿಗೂ ಅಧಿಕ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Read More
Next Story