ಮುದ್ದಹನುಮೇಗೌಡ‌ ಮರಳಿ ಕಾಂಗ್ರೆಸ್‌ ಗೂಡಿಗೆ..
x
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ‌ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮುದ್ದಹನುಮೇಗೌಡ‌ ಅವರು ಕಾಂಗ್ರೆಸ್‌ ಗೆ ಸೇರ್ಪಡೆ..

ಮುದ್ದಹನುಮೇಗೌಡ‌ ಮರಳಿ ಕಾಂಗ್ರೆಸ್‌ ಗೂಡಿಗೆ..

ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಸಾಧ್ಯತೆ


ಲೋಕಸಭಾ ಚುನಾವಣೆ ಹೊತ್ತಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ‌ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ.ಪರಮೇಶ್ವರ್, ಕೆ ಎನ್ ರಾಜಣ್ಣ‌ ಸಮ್ಮುಖದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಮುದ್ದಹನುಮೇಗೌಡ‌ ಅವರು ಕಾಂಗ್ರೆಸ್‌ ಗೆ ಸೇರ್ಪಡೆ ಆಗಿದ್ದಾರೆ.

ಕಳೆದ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸ್ಪರ್ಧಿಸಿದ್ದರು. ಹಾಲಿ ಸಂಸದರಾಗಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್ ಕೈತಪ್ಪಿತ್ತು. ಹಾಗಾಗಿ ಮುದ್ದಹನುಮೇಗೌಡ ಕಮಲ ಪಾಳಯ ಸೇರಿದ್ದರು.

ಇದಾದ ನಂತರ ಬಿಜೆಪಿಯಲ್ಲೂ ಅವರಿಗೆ ಟಿಕೆಟ್ ಸಿಗಲಿಲ್ಲ. 2023ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲಿಲ್ಲ. ಹೀಗಾಗಿ ಮತ್ತೆ ಕಾಂಗ್ರೆಸ್‌ ಸೇರಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನೀಡುವ ಸಾಧ್ಯೆತೆ ಇದೆ ಎಂಬ ಮಾಹಿತಿಯಿದೆ.

ಕೆಲವು ದಿನಗಳಿಂದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಸಕತ್ ಹೈಪ್‌ನಲ್ಲಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದರ ನಡುವೆ ಕೈ ಕೊಟ್ಟು ಹೋದವರು ಇದೀಗ ಮತ್ತೆ ಕೈ ಹಿಡಿದಿದ್ದಾರೆ.

ಮುದ್ದಹನುಮೇಗೌಡ‌ ಅವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಮುನ್ನ ಪಕ್ಷದಲ್ಲಿಯೇ ಕೆಲವು ಅಪಸ್ವರ ಎದ್ದಿದ್ದವು. ಹೀಗಾಗಿ ಅವರನ್ನು ಕಾಂಗ್ರೆಸ್ ಸೇರಿಸಿಕೊಳ್ಳಲು ನಾಯಕರು ಚಿಂತಿಸುತ್ತಿದ್ದರು. ಆದರೆ ಇದೀಗ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಉನ್ನತಯ ನಾಯಕರಿಂದಲೇ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ.

ಶಾಸಕ ಟಿ.ಬಿ. ಜಯಚಂದ್ರ ವಿರೋಧ

ಈ ಹಂತದಲ್ಲಿ ಶಿರಾ ಶಾಸಕ ಟಿ.ಬಿ. ಜಯಚಂದ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪುತ್ರ ಸಂತೋಷ್‌ ಜಯಚಂದ್ರ ಗೆ ಲೋಕಸಭಾ ಚುನಾವಣಾ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಚಿವರಾದ ಡಾ. ಜಿ. ಪರಮೇಶ್ವರ್ ಹಾಗೂ ಕೆ.ಎನ್. ರಾಜಣ್ಣ‌ ಅವರು ತಮ್ಮ ವಾದವನ್ನು ಮುಂದಿಟ್ಟಿದ್ದಾರೆ. ಟಿ.ಬಿ. ಜಯಚಂದ್ರ ಅವರ ಕ್ಷೇತ್ರವು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಮಾತನಾಡುವುದು ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. ಈಗೇನಿದ್ದರೂ ಮುದ್ದಹನುಮೇಗೌಡರಿಗೆ ಟಿಕೆಟ್‌ ಕೊಡುವ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇದಕ್ಕೆ ಒಪ್ಪುತ್ತಾರೆಯೇ ಎಂಬುದಷ್ಟೇ ಮುಂದಿನ ಕುತೂಹಲವಾಗಿದೆ.

ತುಮಕೂರಿನಿಂದ ಮುದ್ದಹನುಮೇಗೌಡ ಕಾಂಗ್ರೆಸ್ ಅಭ್ಯರ್ಥಿ!

ಇನ್ನು, ಮಾಜಿ ಸಂಸದ ಮುದ್ದಹನುಮೇಗೌಡ ಅವರೇ ತುಮಕೂರಿನಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗುವ ಅವಕಾಶ ಇದೆ. ಕಾಂಗ್ರೆಸ್‌ ಗೆ ಮತ ನೀಡಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತುಮಕೂರು ಜನರಲ್ಲಿ ಮನವಿ ಮಾಡಿದ್ದರು. ಹೀಗಾಗಿ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಪಕ್ಕಾ ಆಗಿದೆ ಎಂದು ಹೇಳಲಾಗುತ್ತಿದೆ.

Read More
Next Story