Municipal Elections | Letter to Election Commission; Ward redistricting to begin on November 1
x

ಬಿಬಿಎಂಪಿ ಕೇಂದ್ರ ಕಚೇರಿ

ಪಾಲಿಕೆ ಚುನಾವಣೆ|ಚುನಾವಣಾ ಆಯೋಗಕ್ಕೆ ಪತ್ರ; ನವೆಂಬರ್‌ 1ಕ್ಕೆ ವಾರ್ಡ್ ಮರುವಿಂಗಡಣೆ ಆರಂಭ

ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾಹಿತಿ ನೀಡಿದರು.


“ಪಾಲಿಕೆ ಚುನಾವಣೆಗೆ ಸಿದ್ಧತೆ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗಿದ್ದು, ನವೆಂಬರ್ 1ರ ವೇಳೆಗೆ ವಾರ್ಡ್ ಮರುವಿಂಗಡಣೆ ಪ್ರಕ್ರಿಯೆ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಟಿ.ಎನ್. ಜವರಾಯಿ ಗೌಡ ಅವರು ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025ರ ಜಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇ.15 ರಂದು ಜಿಬಿಎ ಕಾಯ್ದೆ ಜಾರಿ ಮಾಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಎಂದು ಘೋಷಿಸಿದೆ. ಜುಲೈ 19ರಂದು ಐದು ಪಾಲಿಕೆ ರಚಿಸಲಾಗಿದೆ. ಆ.18 ರವರೆಗೂ ಒಂದು ತಿಂಗಳ ಕಾಲ ಆಕ್ಷೇಪ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು" ಎಂದರು.

ದಾಸರಹಳ್ಳಿ, ಆರ್ ಆರ್ ನಗರ, ಪದ್ಮನಾಭ ನಗರ, ಮಹದೇವಪುರ, ಯಶವಂತಪುರ ಕೆಲವು ವಿಧಾನಸಭಾ ಕ್ಷೇತ್ರಗಳು ಭಾಗ ಆಗಿವೆ ನಿಜ. ಇನ್ನು ಕೆಲವು ಪ್ರದೇಶಗಳನ್ನು ಮುಂದಿನ ದಿನಗಳಲ್ಲಿ ಸೇರಿಸಬೇಕಿದೆ ಎಂದು ಮಾಹಿತಿ ನೀಡಿದರು.

"ವಾರ್ಡ್‌ಗಳ ಪುನರ್ ವಿಂಗಡಣೆ ನವೆಂಬರ್‌ 1ಕ್ಕೆ ನಡೆಯಲಿದೆ. ಇದಕ್ಕಾಗಿ ಪಾಲಿಕೆಯಲ್ಲಿ ಆಯುಕ್ತರ ನೇತೃತ್ವದ ಪ್ರತ್ಯೇಕ ತಂಡ ಮಾಡಲಾಗಿದೆ. ನಾವು ನ್ಯಾಯಾಲಯಕ್ಕೆ ಕಾಲ ಮಿತಿಯಲ್ಲಿ ಅಫಿಡವಿಟ್ ಸಲ್ಲಿಸಿದ್ದೇವೆ. ಇನ್ನು ವಾರ್ಡ್‌ಗಳ ರಚನೆ ಬಗ್ಗೆ ಪುನರ್ ವಿಂಗಡಣೆ ಬಳಿಕ ಅಧಿಸೂಚನೆ ಹೊರಡಿಸಲಾಗುವುದು" ಎಂದು ವಿವರಿಸಿದರು.

ಈ ವೇಳೆ ಆದಷ್ಟು ಬೇಗ ಚುನಾವಣೆ ನಡೆಸಿ ಎಂದು ಸದಸ್ಯರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಸದಸ್ಯರ ಸಲಹೆಯನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತೇವೆ ಎಂದರು.

Read More
Next Story