ಕೊಲೆ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ- ಬೈರತಿ ಬಸವರಾಜ್‌ಗೆ ಬಂಧನ ಸಾಧ್ಯತೆ!
x
ಬೈರತಿ ಬಸವರಾಜ್‌

ಕೊಲೆ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ನಿರಾಕರಣೆ- ಬೈರತಿ ಬಸವರಾಜ್‌ಗೆ ಬಂಧನ ಸಾಧ್ಯತೆ!

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.


Click the Play button to hear this message in audio format

ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ರೌಡಿ ಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬೈರತಿ ಬಸವರಾಜ್‌ ಅವರಿಗೆ ಬಂಧನ ಭೀತಿ ಎದುರಾಗಿದೆ. ಈ ಕೊಲೆ ಪ್ರಕರಣದ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬೈರತಿ ಬಸವರಾಜ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್‌ ತಿರಸ್ಕರಿಸಿದೆ. ಹೀಗಾಗಿ ಇದೀಗ ಬೈರತಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರನ್ನು ಅಜ್ಞಾತ ಸ್ಥಳಕ್ಕೆ ರವಾನಿಸಲಾಗಿದೆ.

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

ಬೈರತಿ ಮೇಲಿರುವ ಆರೋಪ ಏನು?

ರೌಡಿ ಶೀಟರ್‌ ಬಿಕ್ಲು ಶಿವನ ಕೊಲೆಗೆ ಸಂಚು ರೂಪಿಸಿರುವ ಆರೋಪ ಬೈತರಿ ವಿರುದ್ಧ ಕೇಳಿ ಬಂದಿದೆ. ಅಲ್ಲದೇ ಮೊದಲು ಪೊಲೀಸರ ವಿಚಾರಣೆ ವೇಳೆ ಸುಳ್ಳು ಮಾಹಿತಿ ನೀಡಿದ್ದರು ಎನ್ನಲಾಗಿದೆ. ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆ ವೇಳೆ ಈ ಕೊಲೆ ಕೇಸ್‌ನಲ್ಲಿ ಬಸವರಾಜ್ ಭಾಗಿಯಾಗಿರುವುದಕ್ಕೆ ಸಾಕ್ಷ್ಯಾಧಾರಗಳಿವೆ ಎಂದು ಎಸ್‌ಪಿಪಿ ಜಗದೀಶ್ ವಾದಿಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್, ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಬಸವರಾಜ್ ಬಂಧನಕ್ಕೆ ಮುಂದಾಗಿದ್ದು, ತಲೆಮರೆಸಿಕೊಂಡಿರುವ ಅವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ ಎನ್ನಲಾಗಿದೆ.

ಏನಿದು ಪ್ರಕರಣ?

ಬಿಕ್ಲು ಶಿವನನ್ನು 2025 ಜುಲೈ 15ರ ರಾತ್ರಿ ಹತ್ಯೆ ಮಾಡಲಾಗಿತ್ತು. ಸುಮಾರು 40-44ವಯಸ್ಸಿನ ಈತನ ನಿಜವಾದ ಹೆಸರು ಶಿವಪ್ರಕಾಶ್. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೌಡಿಸಂ, ರಿಯಲ್‌ ಎಸ್ಟೇಟ್‌ ದಂಧೆ ಮಾಡುತ್ತಿದ್ದ ಈತ ಮೇಲೆ ಹತ್ತಾರು ಪ್ರಕರಣಗಳು ದಾಖಲಾಗಿದ್ದವು. ಜುಲೈ 15ರ ರಾತ್ರಿ ಬೆಂಗಳೂರಿನ ಹಲಸೂರು (ಭಾರತಿನಗರ) ಪ್ರದೇಶದ ಮಿನಿ ಅವೆನ್ಯೂ ರಸ್ತೆಯಲ್ಲಿ ಆತನ ಮನೆ ಬಳಿ 8-12 ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಭೀಕರ ಘಟನೆ ಆತನ ಆತನ ತಾಯಿ ಎದುರೇ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಭಾರತಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್‌ ಅವರ ಆಪ್ತ ಜಗ್ಗ ಪ್ರಮುಖ ಆರೋಪಿಯಾಗಿದ್ದಾನೆ. ಇನ್ನು ಈ ಹತ್ಯೆಗೆ ಬಸವರಾಜ್‌ ಪ್ರೇರಣೆ ಕೊಟ್ಟಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅವರ ವಿರುದ್ಧವೂ ಕೇಸ್‌ ದಾಖಲಾಗಿತ್ತು. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ ನಂತರ ಇದುವರೆಗೆ 20ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ.

Read More
Next Story