
Mysore MUDA Case | ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್‌ನ ವಿಭಾಗೀಯ ಪೀಠವು ನ.23 ಕ್ಕೆ ನಿಗದಿ ಮಾಡಿದೆ.
ಹೈಕೋರ್ಟ್ ಆದೇಶದ ಮರುದಿನವೇ ಇಲ್ಲಿನ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ 14 ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಸೆಪ್ಟೆಂಬರ್ 24ರಂದು ಅರ್ಜಿಯನ್ನು ವಜಾಗೊಳಿಸಿತ್ತು.
ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಕೆಯಾಗಿದೆ.