Mysore MUDA Case | ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಮತ್ತೆ ಇಡಿ ದಾಳಿ
x
ಇಡಿ

Mysore MUDA Case | ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಮತ್ತೆ ಇಡಿ ದಾಳಿ

ಮುಡಾ ಹಗರಣ ಸಂಬಂಧ ಸೋಮವಾರ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಬೆಂಗಳೂರು, ಮೈಸೂರು, ಮಂಡ್ಯದ ಒಟ್ಟು 8 ಕಡೆಗಳಲ್ಲಿ ಶೋಧ ನಡೆಸುತ್ತಿದೆ.


Click the Play button to hear this message in audio format

ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಸೋಮವಾರ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಬೆಂಗಳೂರು, ಮೈಸೂರು, ಮಂಡ್ಯದ ಒಟ್ಟು 8 ಕಡೆಗಳಲ್ಲಿ ಶೋಧ ನಡೆಸುತ್ತಿದೆ.

ಮುಡಾ ಮತ್ತು ಬೆಂಗಳೂರಿನ ಬಿಲ್ಡರ್​ ಎನ್​.ಮಂಜುನಾಥ್​ಗೂ ಏನು ಸಂಬಂಧ ಅಂತ ತನಿಖೆಗೆ ಇಳಿದ ಇಡಿ ಅಧಿಕಾರಿಗಳಿಗೆ ಹಲವು ವಿಚಾರಗಳು ತಿಳಿದುಬಂದಿವೆ. ಎನ್.ಕಾರ್ತಿಕ್ ಡೆವಲಪರ್ ಮಾಲೀಕನಾಗಿರುವ ಎನ್​.ಮಂಜುನಾಥ್ ಮೈಸೂರಿನಲ್ಲಿ ಲೇಔಟ್ ನಿರ್ಮಾಣ ಮಾಡಿದ್ದರು. ಮೈಸೂರಿನಲ್ಲಿ ಕಾರ್ತಿಕ್ ಬಡಾವಣೆ ಹೆಸರಿನಲ್ಲಿ ಲೇಔಟ್​ಗಳನ್ನು​ ನಿರ್ಮಾಣ ಮಾಡಿದ್ದರು. ಮುಡಾ 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಮಾಡುತ್ತಿದ್ದ ವೇಳೆ, ಅಲ್ಲಿನ ಅಧಿಕಾರಿಗಳಿಗೆ ಲಂಚ ನೀಡಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಸೋಮವಾರ (ಅ.28) ಬೆಳ್ಳಂ ಬೆಳಗ್ಗೆ ಬಿಲ್ಡರ್​ ಎನ್​. ಮಂಜುನಾಥ್​ ಅವರ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆಯಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ಕೆಲ ಅಗತ್ಯ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಇಡಿ ಅಧಿಕಾರಿಗಳು ಎನ್​. ಮಂಜುನಾಥ್ ಅವರ ಕಚೇರಿ, ಬ್ಯಾಂಕ್ ಖಾತೆ ಪರಿಶೀಲನೆ ಕೂಡ ನಡೆಸಿದ್ದಾರೆ.

ಇಡಿ ಅಧಿಕಾರಿಗಳು ಅಕ್ಟೋಬರ್​ 18 ಮುಡಾ ಕಚೇರಿ ಸೇರಿದಂತೆ ಮೈಸೂರಿನ ಇತರ ಕೆಲವು ಸ್ಥಳಗಳ ಮೇಲೆ ದಾಳಿ ಮಾಡಿದ್ದರು. ದಾಳಿ ಬಳಿಕ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಡಾದ ಆರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದರು. ಈ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿದ್ದರು. ಅಧಿಕಾರಿಗಳು ಕಳೆದ ವಾರ ಬೆಂಗಳೂರಿನ ಇಡಿ ಕಚೇರಿಯಲ್ಲಿ ಮುಡಾದ ಕೆಲವು ಕೆಳಹಂತದ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದರು.

Read More
Next Story