Mysore MUDA Case | ಮುಡಾ ಹಗರಣದ ಮತ್ತೊಂದು ಸಾಕ್ಷಿ ಬಯಲು ಮಾಡಿದ ಸ್ನೇಹಮಯಿ ಕೃಷ್ಣ
ಸಿಎಂ ಪತ್ನಿ ವಿಚಾರದಲ್ಲಿ ಮುಡಾಕ್ಕೆ ವಿಶೇಷ ತಹಶೀಲ್ದಾರ್‌ರಿಂದ ಹಣ ಪಾವತಿಯಾಗಿದೆ. ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಸ್ನೇಹಮಯಿ ಕೃಷ್ಣ ಬರೆದುಕೊಂಡಿದ್ದಾರೆ.
ರಾಜ್ಯದಲ್ಲಿ ಮುಡಾ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ, ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ಸಿಎಂ ಪತ್ನಿ ಪಾರ್ವತಿ ಅವರ ಕ್ರಯಪತ್ರದ ಮುದ್ರಾಂಕದ ಶುಲ್ಕವನ್ನು ತಹಶೀಲ್ದಾರ್ ಅವರೇ ಪಾವತಿಸಿದ್ದಾರೆ ಎಂದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ಸಾಕ್ಷಿ ತೆರೆದಿಟ್ಟಿದ್ದಾರೆ.
ಸಿಎಂ ಪತ್ನಿ ವಿಚಾರದಲ್ಲಿ ಮುಡಾ ವಿಶೇಷ ತಹಶೀಲ್ದಾರ್‌ರಿಂದ ಹಣ ಪಾವತಿಯಾಗಿದೆ. ನನ್ನ ಆರೋಪಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಸ್ನೇಹಮಯಿ ಕೃಷ್ಣ ಬರೆದುಕೊಂಡಿದ್ದಾರೆ.
ಕ್ರಯಪತ್ರ ನೋಂದಣಿ ಮಾಡಿಸಿಕೊಳ್ಳುವವರು ನೋಂದಣಿಗೆ ಸಂಬಂಧಿಸಿದ ಶುಲ್ಕಗಳನ್ನು ಪಾವತಿ ಮಾಡಬೇಕು. ಅದೇ ರೀತಿ ಎನ್.ಮಂಜುನಾಥ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ. ಆದರೆ, ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಕ್ರಯಪತ್ರ ಗಮನಿಸಿ, ಮುಡಾದ ವಿಶೇಷ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿ ಮಾಡಿದ್ದಾರೆ ಎಂಬುದು ಖಚಿತವಾಗಿ ತಿಳಿದುಬರುತ್ತದೆ ಎಂದು ಅವರು ಆರೋಪಿಸಿದ್ದಾರೆ.
Next Story