Mysore MUDA Scam | ನಕಲಿ ದಾಖಲೆ, ಕಡತ ನಾಶ ಆರೋಪ: ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು
x

Mysore MUDA Scam | ನಕಲಿ ದಾಖಲೆ, ಕಡತ ನಾಶ ಆರೋಪ: ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು


ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಸರಣಿ ದೂರುಗಳ ಬಳಿಕ ಇದೀಗ ಅವರ ಪತ್ನಿ ಪಾರ್ವತಿ ಅವರ ವಿರುದ್ಧವೂ ದೂರು ದಾಖಲಾಗಿದೆ.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ.

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ವಿರುದ್ಧ ನಕಲಿ ಸಹಿ ವಿಚಾರವಾಗಿ ದೂರು ದಾಖಲಿಸಿದ್ದಾರೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಅವರು ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ದಾಖಲೆಯ ವೈಟ್ನ‌ರ್ ಹಿಂದಿನ ಅಕ್ಷರಗಳೇನು ಎಂಬ ಬಗ್ಗೆ ವಿಡಿಯೋ ಬಿಡುಗಡೆ ಮಾಡಿದ್ದರು. ‌ʼದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರʼ ಎಂಬ ಅಕ್ಷರಗಳ ಮೇಲೆ ವೈಟ್ನ‌ರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆ ದೂರು ದಾಖಲಾಗಿದೆ. ಪತ್ರದಲ್ಲಿ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿರುವ ಸಹಿಯಲ್ಲಿ ವ್ಯತ್ಯಾಸವಿದೆ. ಆ ನಿಟ್ಟಿನಲ್ಲೂ ತನಿಖೆ ನಡೆಸುವಂತೆ ದೂರಿನಲ್ಲಿ ಕೋರಲಾಗಿದೆ.

Read More
Next Story