Mysore MUDA Scam | ಇಂದು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ
x
ಸಿದ್ದರಾಮಯ್ಯ

Mysore MUDA Scam | ಇಂದು ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ, ಎಫ್ಐಆರ್ ದಾಖಲಿಸಲು ಲೋಕಾಯುಕ್ತ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಲೋಕಾಯುಕ್ತ ಐಜಿಪಿ, ಎಡಿಜಿಪಿ, ಮೈಸೂರು ಲೋಕಾಯುಕ್ತ ಎಸ್​​​​ಪಿ ಗುರುವಾರ ಸಿಎಂ ವಿರುದ್ಧ ಮುಂದಿನ ಹಂತದ ತನಿಖೆ ಬಗ್ಗೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಲೋಕಾಯುಕ್ತ ಮೈಸೂರು ಎಸ್‌ಪಿ ಉದೇಶ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಪ್ರತಿ ಪಡೆದಿದ್ದಾರೆ.

ಯಾವುದೇ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗುವ ಸಾಧ್ಯತೆಯಿದೆ. ಎಫ್​ಐಆರ್​​ನಲ್ಲಿ ಸಿಎಂ ಸಿದ್ದರಾಮಯ್ಯ A1 (ಆರೋಪಿ ನಂಬರ್ 1) ಆಗುವ ಸಾಧ್ಯತೆ ಇದೆ. ಮತ್ತೊಂದೆಡೆ ಎಫ್​ಐಆರ್ ದಾಖಲಿಸಲು ವಿಳಂಬವಾಗುತ್ತಿದೆ ಎಂದು ಆರೋಪಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್‌ಪಿ ವಿರುದ್ಧವೇ ದೂರು ನೀಡಿದ್ದಾರೆ.

Read More
Next Story