Mysore MUDA Scam | 14 ನಿವೇಶನಗಳ ಪರಿಶೀಲನೆ ನಡೆಸಿದ ಲೋಕಾಯುಕ್ತ
x
ಸಿ.ಎಂ ಸಿದ್ದರಾಮಯ್ಯ

Mysore MUDA Scam | 14 ನಿವೇಶನಗಳ ಪರಿಶೀಲನೆ ನಡೆಸಿದ ಲೋಕಾಯುಕ್ತ

ಸಿಎಂ ಪತ್ನಿ ಬಿ ಎಂ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿ ಮುಡಾದಿಂದ ಮಂಜೂರಾದ 14 ಪರ್ಯಾಯ ನಿವೇಶನಗಳ ಸ್ಥಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದರು


Click the Play button to hear this message in audio format

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಬಿಎಂ ಪಾರ್ವತಿ ಅವರಿಗೆ ಮೈಸೂರಿನ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತದಲ್ಲಿ ಮುಡಾದಿಂದ ಮಂಜೂರಾದ 14 ಪರ್ಯಾಯ ನಿವೇಶನಗಳ ಸ್ಥಳ ಪರಿಶೀಲನೆಯನ್ನು ಶುಕ್ರವಾರ ನಡೆಸಿದರು.

ಸ್ಥಳ ಪರಿಶೀಲನೆ ನಡೆಸುವ ಸಂದರ್ಭದಲ್ಲಿ ಅರ್ಜಿದಾರರು ಮತ್ತು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಪೊಲೀಸರು ತಮ್ಮೊಂದಿಗೆ ಕರೆದೊಯ್ದಿದ್ದಾರೆ.

ಈ ಮಧ್ಯೆ ಪಾರ್ವತಿ ಅವರ ಮನವಿಯ ಮೇರೆಗೆ ಮುಡಾ ಆಯುಕ್ತ ಎಎನ್ ರಘುನಂದನ್ ಅವರು ನಿವೇಶನಗಳನ್ನು ಹಿಂಪಡೆಯಲು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ನೋಂದಣಾಧಿಕಾರಿ ಕಚೇರಿ ಸಬ್ ರಿಜಿಸ್ಟ್ರಾರ್ ವಿ.ರುಕ್ಮಿಣಿ ಅವರು ಪ್ರಕ್ರಿಯೆ ಪೂರ್ಣಗೊಳಿಸಿ ದಾಖಲೆಗಳನ್ನು ಮುಡಾಕ್ಕೆ ಗುರುವಾರ ಬಿಡುಗಡೆ ಮಾಡಿದರು. ಮೈಸೂರು ತಾಲೂಕಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿನ 3.16 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳದೆ ಬಳಸಿಕೊಂಡ ಆರೋಪದ ಮೇಲೆ ಪರಿಹಾರವಾಗಿ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಪಾರ್ವತಿ ಮನವಿಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಆಧರಿಸಿ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 25 ರಂದು ಚುನಾಯಿತ ಪ್ರತಿನಿಧಿಗಳಿಗೆ ಸಂಬಂಧಿಸಿದ ಪ್ರಕರಣಗಳ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸ್ನೇಹಮಯಿ ಕೃಷ್ಣ ಅವರು ನೀಡಿದ ದೂರಿನ ಆಧಾರದ ಮೇಲೆ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ತನಿಖೆಯನ್ನು ಪ್ರಾರಂಭಿಸುವಂತೆ ಮೈಸೂರಿನ ನ್ಯಾಯವ್ಯಾಪ್ತಿಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

Read More
Next Story