ನಾಗಮಂಗಲ ಗಲಾಟೆ | ಕರ್ತವ್ಯ ಲೋಪ ಆರೋಪ; ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್ ಅಮಾನತು
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನುಅಮಾನತುಗೊಳಿಸಲಾಗಿದೆ.
ಮಂಡ್ಯದ ನಾಗಮಂಗಲದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪ ಆರೋಪದಲ್ಲಿ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನುಅಮಾನತುಗೊಳಿಸಿ ದಕ್ಷಿಣ ವಲಯ ಡಿಐಜಿಪಿ ಬೋರಲಿಂಗಯ್ಯ ಅವರು ಆದೇಶಿಸಿದ್ದಾರೆ.
ಬುಧವಾರ ಸಂಜೆ ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಘರ್ಷಣೆ ಉಂಟಾಗಿದೆ. ಈ ಸಂಬಂಧ 150 ಮಂದಿಯ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ. 52 ಮಂದಿಯ ಬಂಧನ ಮಾಡಲಾಗಿದೆ.
ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಆರೋಪಿಗಳಿಗೆ ಬಲೆ ಬೀಸುತ್ತಿದ್ದಾರೆ. ಸದ್ಯ ಪೊಲೀಸರು ತಲೆಮರೆಸಿಕೊಂಡ 97 ಮಂದಿಯ ಹುಡುಕಾಟ ನಡೆಸುತ್ತಿದ್ದಾರೆ.
Next Story