Namma Metro | ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತ
x
ಗ್ರೀನ್ ಲೈನ್ ಮೆಟ್ರೋ

Namma Metro | ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತ

ಬೆಂಗಳೂರು ನಮ್ಮ ಗ್ರೀನ್​​​ ಲೈನ್ ಹಳಿಯಲ್ಲಿ ತಾಂತ್ರಿಕ ದೋಷ ಉಂಟಾಗಿದ್ದು, ಆರ್​ವಿ ರಸ್ತೆಯಿಂದ ರೇಷ್ಮೆ ಸಂಸ್ಥೆ ವರೆಗಿನ ಮೆಟ್ರೋ ಸಂಚಾರ ಸ್ಥಗಿತಗೊಂಡಿದೆ.


Click the Play button to hear this message in audio format

ವಿದ್ಯುತ್‌ ಸಮಸ್ಯೆಯಿಂದ ನಮ್ಮ ಮೆಟ್ರೋ ಹಸಿರು ಮಾರ್ಗದ ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗಿದೆ. ಸಿಲ್ಕ್ ಇನ್ಸ್ಟಿಟ್ಯೂಟ್ ನಿಂದ (ರೇಷ್ಮೆ ಸಂಸ್ಥೆ) ಆರ್​ವಿ ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

ಮಂಗಳವಾರ (ಜು.30) ಸಂಜೆ 5.33ರಿಂದ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಸಮಸ್ಯಯಾಗಿದೆ. ನಾಗಸಂದ್ರದಿಂದ ಆರ್ ವಿ ರೋಡ್ ವರೆಗೆ ಮಾತ್ರ ಮೆಟ್ರೋ ಸಂಚಾರ ಇದ್ದು, ಆರ್​ವಿ ರಸ್ತೆಯಿಂದ ರೇಷ್ಮೆ ಸಂಸ್ಥೆವರೆಗೆ ಮೆಟ್ರೋ ಸಂಚಾರ ಸ್ಥಗಿತವಾಗಿದೆ ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ.

ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಹಿನ್ನೆಲೆ ಇಂದು ಸಂಜೆ 5.33ರಿಂದ ಹಸಿರು ಮಾರ್ಗದಲ್ಲಿ ರೈಲುಗಳ ಸಂಚಾರ ವ್ಯತ್ಯಯ ಆಗಿದೆ. ನಾಗಸಂದ್ರ-ಆರ್‌ವಿ ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಮೆಟ್ರೋ ರೈಲುಗಳು ಓಡಲಿವೆ ಎಂದು ತನ್ನ ಅಧಿಕೃತ ಟ್ವೀಟ್‌ ಮೂಲಕ ಬಿಎಂಆರ್‌ಸಿಎಲ್‌ ತಿಳಿಸಿದೆ. ಈ ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ.

ಬನಶಂಕರಿ, ಜೆಪಿ ನಗರ, ಯಲಚೇನಹಳ್ಳಿ, ಕೋಣನಕುಂಟೆ ಕ್ರಾಸ್‌, ದೊಡ್ಡಕಲ್ಲಸಂದ್ರ, ವಜರಹಳ್ಳಿ, ತಲಘಟಪುರ, ರೇಷ್ಮೇ ಮಂಡಳಿ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ. ಇನ್ನು ನೇರಳೆ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ಮಾಡಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿಯುತ್ತಿರುವ ಭಾರೀ ಮಳೆಯ ನಡುವೆ ದಿಢೀರ್‌ ರೈಲು ಓಡಾಟ ಸ್ಥಗಿತಗೊಂಡ ಕಾರಣದಿಂದಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಅತಿ ಶೀಘ್ರದಲ್ಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವುದಾಗಿ ಬಿಎಂಆರ್‌ಸಿಎಲ್‌ ತಿಳಿಸಿದೆ.

Read More
Next Story