Naxals Surrender | ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಸುನೀಲ್‌ಕುಮಾರ್ ವಾಗ್ದಾಳಿ
ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಸುನೀಲ್‌ಕುಮಾರ್ ಹೇಳಿದ್ದಾರೆ.
ರಾಜ್ಯದಲ್ಲಿ ಆರು ಮಂದಿ ನಕ್ಸಲರಿಗೆ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸುನೀಲ್ ಕುಮಾರ್, ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ - ಉಗ್ರರಿಗೆ ಸುಗ್ಗಿಯಾಗಿದೆ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ- ಸೌಕರ್ಯ ಎಲ್ಲವೂ ನೀಡಲಾಗುತ್ತಿದೆ. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿರುವ ಅವರು, ಇದರಿಂದ ಪೊಲೀಸರ ಆತ್ಮ ಧೈರ್ಯ ಏನಾಗಬೇಡ ? ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಅವರು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.