ಕಳಪೆ ಔಷಧಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ದಿನೇಶ್ ಗುಂಡೂರಾವ್
x
ದಿನೇಶ್‌ ಗುಂಡೂರಾವ್‌

ಕಳಪೆ ಔಷಧಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ದಿನೇಶ್ ಗುಂಡೂರಾವ್


Click the Play button to hear this message in audio format

ಕಳಪೆ ಗುಣಮಟ್ಟದ ಔಷಧಗಳು ಮಾರುಕಟ್ಟೆ ಸರಬರಾಜಾಗುತ್ತಿದ್ದು, ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಮತ್ತು ಸರ್ಕಾರಿ ಫಾರ್ಮಸಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಬುಧವಾರ ತಿಳಿಸಿದರು.

ಬೆಂಗಳೂರಿನಲ್ಲಿ ನಡೆದ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕಳಪೆ-ಗುಣಮಟ್ಟದ ಔಷಧಗಳು ಜನರ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಮಾತನಾಡಿದರು.

"ಕಳಪೆ ಗುಣಮಟ್ಟದ ಔಷಧಗಳನ್ನು ಯಾರ ಭಯವೂ ಇಲ್ಲದೇ ಮಾರಾಟ ಮಾಡಿ ಜನರ ಮನೆಗೆ ತಲುಪಿಸಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಔಷಧ ನಿಯಂತ್ರಣ ಇಲಾಖೆಯ ಮುಖ್ಯ ಉದ್ದೇಶ ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಔಷಧಗಳ ಗುಣಮಟ್ಟದ ಮೇಲೆ ನಿಗಾ ಇಡುವುದುʼ’ ಎಂದು ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಔಷಧಗಳ ಗುಣಮಟ್ಟ ಪರಿಶೀಲನೆ, ಔಷಧಾಲಯಗಳಿಗೆ ಅಧಿಕೃತ ಭೇಟಿ, ಕಳಪೆ ಗುಣಮಟ್ಟದ ಔಷಧ ತಯಾರಿಸುವವರ ವಿರುದ್ಧ ಕೈಗೊಂಡ ಕ್ರಮಗಳ ಕುರಿತು ವಿಸ್ತೃತ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿ, ಕ್ರಿಯಾ ಯೋಜನೆ ರೂಪಿಸುವಂತೆ ಔಷಧ ನಿಯಂತ್ರಕರಿಗೆ ಸೂಚಿಸಿದರು. ಔಷಧಗಳು ಮಾರುಕಟ್ಟೆಗೆ ಬರುವುದಿಲ್ಲ. ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುವವರಿಗೆ ಇಲಾಖೆ ರಕ್ಷಣೆ ಮತ್ತು ಬೆಂಬಲ ನೀಡುತ್ತದೆ ಎಂದು ಅವರು ಅಧಿಕಾರಿಗಳಿಗೆ ಭರವಸೆ ನೀಡಿದರು.

Read More
Next Story