
ಸಾಂದರ್ಭಿಕ ಚಿತ್ರ
ಬೆಂಗಳೂರು; ಪೊದೆಯ ಬಳಿ ಬ್ಯಾಗ್‌ನಲ್ಲಿ ನವಜಾತ ಹೆಣ್ಣು ಶಿಶು ಪತ್ತೆ
ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಪರಿಶೀಲಿಸಿದಾಗ ಪೊದೆಯಲ್ಲಿ ನವಜಾತ ಶಿಶುವು ಬ್ಯಾಗ್‌ನಲ್ಲಿ ಬಟ್ಟೆಯೊಳಗೆ ಸುತ್ತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ಹೊರವಲಯದ ಚಂದಾಪುರ ಚೋಳರ ಕೆರೆಯ ಏರಿ ಮೇಲೆ ಗಿಡಗಳ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ.
ಮಗು ಅಳುತ್ತಿರುವ ಶಬ್ದ ಕೇಳಿದ ಸ್ಥಳೀಯರು ಪರಿಶೀಲಿಸಿದಾಗ ಪೊದೆಯಲ್ಲಿ ನವಜಾತ ಶಿಶುವನ್ನು ಬಟ್ಟೆಯಲ್ಲಿ ಸುತ್ತಿಟ್ಟು, ಬ್ಯಾಗ್‌ನಲ್ಲಿಟ್ಟಿದ್ದರು. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಶಿಶುವನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿದರು ಎಂದು ತಿಳಿದುಬಂದಿದೆ.
ಆಸ್ಪತ್ರೆ ಸಿಬ್ಬಂದಿ ಮಗುವನ್ನು ಆರೈಕೆ ಮಾಡಿದ್ದಾರೆ. ಮಗುವು ಮೆಕೋನಿಯಮ್ ಸ್ಟೈನ್ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ವಾಣಿ ವಿಲಾಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳ ಸುಪರ್ದಿಯಲ್ಲಿ ಮಗುವಿನ ಪೋಷಣೆ ಕಾರ್ಯ ನಡೆಯುತ್ತಿದೆ. ಈ ನವಜಾತ ಶಿಶುವನ್ನು ಯಾರು ಬಿಟ್ಟುಹೋದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.ಈ ಕುರಿತು ಸೂರ್ಯನಗರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Next Story