Terror Activity | ಸಿಂಡಿಕೇಟ್‌ ಮೂಲಕ ಹಣ ಸಂಗ್ರಹಿಸುತ್ತಿದ್ದ ಪಿಎಫ್‌ಐ ಉಗ್ರ ಬಂಧನ
x
ರಾಷ್ಟ್ರೀಯ ತನಿಖಾಧಿಕಾರಿಗಳ ತಂಡ

Terror Activity | ಸಿಂಡಿಕೇಟ್‌ ಮೂಲಕ ಹಣ ಸಂಗ್ರಹಿಸುತ್ತಿದ್ದ ಪಿಎಫ್‌ಐ ಉಗ್ರ ಬಂಧನ

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತಂಡ ಶನಿವಾರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.


Click the Play button to hear this message in audio format

ನಿಷೇಧಿತ ಪಿಎಫ್​ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿನ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ತಂಡ ದೆಹಲಿಯಲ್ಲಿ ಬಂಧಿಸಿದೆ.

ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊಹಮ್ಮದ್ ಸಜ್ಜದ್ ಆಲಂ ಎಂಬಾತ ಶನಿವಾರ ದುಬೈನಿಂದ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಎನ್‌ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.

ಎನ್‌ಐಎ ನ್ಯಾಯಾಲಯವು ಪಿಎಫ್‌ಐ ತರಬೇತಿ ಪಡೆದ ಕೇಡರ್ ಆಲಂ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು. ಆತನ ವಿರುದ್ಧ ಲುಕ್‌ಔಟ್ ಸುತ್ತೋಲೆ (ಎಲ್‌ಒಸಿ) ಕೂಡ ಹೊರಡಿಸಿತ್ತು. ಆರೋಪಿಯು ದುಬೈನಿಂದ ಬಿಹಾರದ ಪಿಎಫ್‌ಐ ಕಾರ್ಯಕರ್ತರಿಗೆ ಯುಎಇ, ಕರ್ನಾಟಕ ಮತ್ತು ಕೇರಳ ಮೂಲದ ಸಿಂಡಿಕೇಟ್ ಮೂಲಕ ಅಕ್ರಮ ಹಣವನ್ನು ರವಾನಿಸುತ್ತಿದ್ದ ಎಂದು ಎನ್​ಐಎ ತಿಳಿಸಿದೆ.

ಪಿಎಫ್‌ಐನ ಈ ಕೇಡರ್‌ ಸಮಾಜದ ವಿವಿಧ ಧರ್ಮ ಹಾಗೂ ಗುಂಪುಗಳ ನಡುವೆ ದ್ವೇಷ ಹಾಗೂ ಭಯದ ವಾತಾವರಣ ಸೃಷ್ಟಿಸಿ ಶಾಂತಿ, ಸಾಮರಸ್ಯ ಕದಡುತ್ತಿತ್ತು. 2047ರ ಹೊತ್ತಿಗೆ ಭಾರತವನ್ನು ಇಸ್ಲಾಂ ದೇಶವನ್ನಾಗಿಸಲು ಕ್ರಿಮಿನಲ್‌ ಶಕ್ತಿಗಳನ್ನು ಬಳಸಿ ತನ್ನ ಸಿದ್ಧಾಂತಗಳನ್ನು ಹರಡುತ್ತಿತ್ತು. ಇದರ ಮೇಲೆ 2022ರ ಜುಲೈನಲ್ಲೇ ಬಿಹಾರದ ಫೂಲ್ವಾರಿ ಶರೀಫ್‌ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಎನ್‌ಐಎ, 17 ಜನರ ವಿರುದ್ಧ ಚಾರ್ಜ್‌ಶೀಟ್‌ ಸಿದ್ಧಪಡಿಸಿದ್ದು, ಬಂಧಿತ ಆಲಂ 18ನೆಯವನು.

Read More
Next Story